ನೆಲ್ಯಾಡಿ: ಮಂಗಳೂರು ವಿ.ವಿ. ಘಟಕ ಕಾಲೇಜು ಅನುಷ್ಠಾನ ಸಮಿತಿ ಸಭೆ
Team Udayavani, May 25, 2018, 5:35 AM IST
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ತೊಟ್ಟಿಲಗುಂಡಿ ಎಂಬಲ್ಲಿ ಆರಂಭಗೊಳ್ಳಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ಅನುಷ್ಠಾನ ಸಮಿತಿ ಸಭೆ ನೆಲ್ಯಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಘಟಕ ಕಾಲೇಜು ಅನುಷ್ಠಾನ ಸಮಿತಿ ಅಧ್ಯಕ್ಷೆ, ತಾ.ಪಂ. ಸದಸ್ಯೆ ಉಷಾ ಅಂಚನ್ ಅಧ್ಯಕ್ಷತೆ ವಹಿಸಿದ್ದರು.
2018-19ನೇ ಶೈಕ್ಷಣಿಕ ವರ್ಷದಿಂದಲೇ ನೆಲ್ಯಾಡಿಯಲ್ಲಿ ಘಟಕ ಕಾಲೇಜು ಕಾರ್ಯಾರಂಭ ಮಾಡಲಿದ್ದು ಪ್ರಥಮ ವರ್ಷ ಬಿ.ಎ., ಬಿ.ಕಾಂ. ಹಾಗೂ ಬಿ.ಬಿ.ಎಂ. ತರಗತಿಗಳು ನಡೆಯಲಿವೆ. ಮೇ 25ರಂದು ಅಪರಾಹ್ನ 2.30ಕ್ಕೆ ದಾಖಲಾತಿ ಪ್ರಾರಂಭಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಿವಿ ಘಟಕಕ್ಕೆ ಸರಕಾರ ಮಂಜೂರುಗೊಳಿಸಿದ ತೊಟ್ಟಿಲಗುಂಡಿಯಲ್ಲಿನ 27 ಎಕ್ರೆ ಜಾಗದಲ್ಲಿ ಕಟ್ಟಡ ನಿರ್ಮಾಣಗೊಳ್ಳಬೇಕಾಗಿದೆ. ಪ್ರಸ್ತುತ ವರ್ಷ ನೂತನ ತರಗತಿಗಳನ್ನು ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಕಾಲೇಜಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅವರ ಹೆತ್ತವರೊಂದಿಗೆ ಮೇ 25ರಂದು ಅಪರಾಹ್ನ 2 ಗಂಟೆಗೆ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಉಪಸ್ಥಿತರಿರುವಂತೆ ಕೋರಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್, ನಿವೃತ್ತ ಮುಖ್ಯಗುರು ರವೀಂದ್ರ ಟಿ., ನೆಲ್ಯಾಡಿ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಗ್ರಾ.ಪಂ. ಸದಸ್ಯರಾದ ಅಬ್ರಹಾಂ ಕೆ.ಪಿ., ತೀರ್ಥೇಶ್ವರ ಉರ್ಮಾನು, ಫ್ಲೋರಿನಾ ಡಿ’ಸೋಜಾ, ಪ್ರಮುಖರಾದ ಹನೀಫ್ ಸಿಟಿ, ಶಿವರಾಮ ಮಕ್ಕಿಗದ್ದೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯ ಗಂಗಾಧರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Supreme Court: ತೀರ್ಪಿನಲ್ಲಿ ಲವ್ ಜೆಹಾದ್ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್ ನಕಾರ
Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.