Mangaluru ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ
25 ಲಕ್ಷ ರೂ. ಲಂಚ...!!!, ದಲ್ಲಾಳಿಯೂ ವಶಕ್ಕೆ
Team Udayavani, Mar 23, 2024, 7:30 PM IST
ಮಂಗಳೂರು : ಉದ್ಯಮಿ ಯೊಬ್ಬರಿಂದ ದಲ್ಲಾಳಿಯ ಮೂಲಕ 25 ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಆಲಿ ಮತ್ತು ದಲ್ಲಾಳಿ ಮಹಮ್ಮದ್ ಸಲೀಂ ಎಂಬವನನ್ನು ಲೋಕಾಯುಕ್ತ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸುವ ಯೋಜನೆ ಹಾಕಲಾಗಿತ್ತು.
ದೂರುದಾರ ಉದ್ಯಮಿ ಮಂಗಳೂರು ತಾಲೂಕಿನ ಕುಡುಪು ಗ್ರಾಮದಲ್ಲಿ 10.8 ಎಕರೆ ಜಮೀನನ್ನು ಭೂಮಾಲಕರಿಂದ ಖರೀದಿಸಿ, ಪಾಲಿಕೆಯ ಯೋಜನೆಗಾಗಿ ಸ್ವಲ್ಪಾಂಶವನ್ನು ಬಿಟ್ಟುಕೊಟ್ಟಿದ್ದರು. ಜಮೀನನ್ನು ಟಿ.ಡಿ.ಆರ್. ನಿಯಮದಡಿ ಖರೀದಿ ಮಾಡುವ ಬಗ್ಗೆ ಮನಪಾದೊಂದಿಗೆ ಉದ್ಯಮಿ ಹಾಗೂ ಜಮೀನಿನ ಈ ಹಿಂದಿನ ಮಾಲಕರಿಗೆ ಪತ್ರ ವ್ಯವಹಾರವಾಗಿತ್ತು. ಅದರಂತೆ ಈ ಜಮೀನು 2024ರ ಜನವರಿಯಲ್ಲಿ ಮನಪಾ ಹೆಸರಿಗೆ ನೋಂದಣಿಯಾಗಿದೆ. ಬಳಿಕ ಮನಪಾ ಆಯುಕ್ತರು ಟಿ.ಡಿ.ಆರ್. ನೀಡಲು ಮುಡಾ ಆಯುಕ್ತರಿಗೆ ಫೆಬ್ರವರಿ ತಿಂಗಳಲ್ಲಿ ಕಳುಹಿಸಿದ್ದರು. ಆದರೆ ಮುಡಾ ಆಯುಕ್ತ ಮನ್ಸೂರ್ ಆಲಿ ಅವರು ಆ ಕಡತವನ್ನು ವಿಲೇವಾರಿ ಮಾಡದೆ ಬಾಕಿ ಇಟ್ಟಿದ್ದರು. ಈ ಬಗ್ಗೆ ಉದ್ಯಮಿ ಮುಡಾ ಆಯುಕ್ತ ಮನ್ಸೂರ್ ಆಲಿ ಅವರಲ್ಲಿ ವಿಚಾರಿಸಿದಾಗ 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಮುಡಾ ಆಯುಕ್ತ ಮನ್ಸೂರ್ ಆಲಿ ಅವರ ನಿರ್ದೇಶನದಂತೆ ದಲ್ಲಾಳಿ ಮಹಮ್ಮದ್ ಸಲೀಂ ಶನಿವಾರ ಸಂಜೆ ನಗರದ ಮಂಗಳಾ ಕ್ರೀಡಾಂಗಣದ ಬಳಿ ಉದ್ಯಮಿಯಿದ 25 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಚುನಾವಣ ಪ್ರಯುಕ್ತ ಸಭೆಯಲ್ಲಿದ್ದ ಆಯುಕ್ತ ಮನ್ಸೂರ್ ಆಲಿ ಸಭೆ ಮುಗಿಸಿ ಹೊರಗೆ ಬರುತ್ತಿರುವಾಗ ಸಂಜೆ 6 ಗಂಟೆಯ ವೇಳೆಗೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಪ್ರಭಾರ ಪೊಲೀಸ್ ಅಧೀಕ್ಷಕ ಚಲುವರಾಜು ಬಿ., ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ., ಸುರೇಶ್ ಕುಮಾರ್ ಪಿ. ಅವರು ಸಿಬಂದಿಯ ಜತೆ ಕಾರ್ಯಾಚರಣೆ ನಡೆಸಿದ್ದಾರೆ.
ಮುಡಾ ಕಚೇರಿಯಲ್ಲಿ ಪತ್ತೆಯಾಗಿತ್ತು ಹಣದ ಬ್ಯಾಗ್
ಮುಡಾ ಕಚೇರಿಗೆ ಮಾ. 13ರಂದು ಲೋಕಾಯುಕ್ತ ದಾಳಿ ನಡೆದಿತ್ತು. ಈ ಸಂದರ್ಭ ಹಣವಿರುವ ಬ್ಯಾಗ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿತ್ತು. ದಾಳಿ ವೇಳೆ ಸುಮಾರು 16 ತಾಸುಗಳ ಕಾಲ ಪರಿಶೀಲನೆ ನಡೆಸಲಾಗಿತ್ತು. ಮಾತ್ರವಲ್ಲದೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಇತರ ವ್ಯಕ್ತಿಗಳ ಬಳಿಯಲ್ಲೂ ದೊಡ್ಡ ಮೊತ್ತದ ಹಣ ಕಂಡುಬಂದಿತ್ತು. ದೀರ್ಘ ಕಾಲದಿಂದ ವಿಲೇವಾರಿಯಾಗದ ಹಲವಾರು ಕಡತಗಳು ಈ ವೇಳೆ ಪತ್ತೆಯಾಗಿದ್ದವು.
ಅಧಿಕಾರಿಗಳು ಫೋನ್ ಮೂಲಕ ಬ್ರೋಕರ್‌ಗಳೊಡನೆ ಹೊಂದಾಣಿಕೆ ಮಾಡುತ್ತಿರುವ ಬಗ್ಗೆಯೂ ಸಾಕ್ಷಿಗಳು ಲಭ್ಯವಾಗಿತ್ತು. ಈ ಕುರಿತ ತನಿಖೆ ಪ್ರಗತಿಯಲ್ಲಿರುವಾಗಲೇ ದೊಡ್ಡ ಮೊತ್ತದ ಲಂಚ ಪ್ರಕರಣ ಬೆಳಕಿಗೆ ಬಂದಿದೆ.
ಆಯುಕ್ತರ ಮೇಲೆ ಲೈಂಗಿಕ ಕಿರುಕುಳ ಆರೋಪ
ಮುಡಾ ಆಯುಕ್ತ ಮನ್ಸೂರ್ ಆಲಿ ಅವರ ಮೇಲೆ ಕೆಲವು ತಿಂಗಳುಗಳ ಹಿಂದೆ ಮುಡಾ ಕಚೇರಿ ಸಿಬಂದಿಯೇ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.