Mangaluru ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ
Team Udayavani, Jun 7, 2024, 9:46 PM IST
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿಯೋರ್ವಳು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್ರಾಜ್ ಎಂಬಾತನ ಸ್ನೇಹವಾಗಿತ್ತು. ಮಾ. 23ರಂದು ಯುವತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದಾಗ ಅಲ್ಲಿಗೆ ಬಂದ ಆರೋಪಿ ವಿನೋದ್ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ.
ಅನಂತರವೂ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ನೆರೆಮನೆಯವನು ಅತ್ಯಾಚಾರವೆಸಗಿರುವ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14 ವರ್ಷದ ಬಾಲಕಿಯ ಮನೆಯ ಪಕ್ಕದ ಮನೆಯಲ್ಲಿ ರೋಶನ್ ಎಂಬಾತ ವಾಸವಾಗಿದ್ದ. ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಎಪ್ರಿಲ್ನಲ್ಲಿ ಶಾಲೆಗೆ ರಜೆ ಇದ್ದಾಗ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ರೋಶನ್ ಮತ್ತೆ ಅತ್ಯಾಚಾರವೆಸಗಿದ್ದಾನೆ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.