Mangaluru; ಮತ್ತೆ ನಳಿನ್ ಕುಮಾರ್ ಅವರನ್ನು ಗೆಲ್ಲಿಸಿ : ವಿಜಯೇಂದ್ರ ಘೋಷಣೆ
Team Udayavani, Nov 22, 2023, 8:03 PM IST
ಮಂಗಳೂರು: ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಮತ್ತೆ ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆ ನೀಡಿರುವುದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಮಂಗಳೂರಿನಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ವಿಜಯೇಂದ್ರ ಅವರು. ಬಿಜೆಪಿ ಧ್ವಜವನ್ನು ಎತ್ತರಕ್ಕೆ ಹಾರಿಸಿರುವ ಕೀರ್ತಿ ನಮ್ಮ ಕಾರ್ಯಕರ್ತರಿಗೆ ಸಲ್ಲುತ್ತದೆ. ಇದೇ ವೇಳೆ ಪಕ್ಷದ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ, ಮುಂದಿನ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನಳಿನ್ ಕುಮಾರ್ ಕಟೀಲ್ ಅವರನ್ನು ಮತ್ತೆ ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ಇದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ರಾಜಕೀಯ ವಲಯದಲ್ಲಿ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಲಾಗುತ್ತದೆ ಎನ್ನುವ ಚರ್ಚೆಯ ನಡುವೆ ವಿಜಯೇಂದ್ರ ಅವರು ನೀಡಿದ ಹೇಳಿಕೆ ಹೊಸ ಚರ್ಚೆ ಹುಟ್ಟು ಹಾಕಿದೆ. ಇದೀಗ ಮೂರು ಬಾರಿಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮತ್ತೆ ಕಣಕ್ಕಿಳಿಯುವ ಸುಳಿವನ್ನು ವಿಜಯೇಂದ್ರ ಬಹಿರಂಗ ವೇದಿಕೆಯಲ್ಲಿ ನೀಡಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಆರಂಭದ ಕಾಲದಿಂದ ಇಂದಿನವರೆಗೂ ಭದ್ರನೆಲೆ ಒದಗಿಸಿರುವುದು ನಮ್ಮ ಕರಾವಳಿ ಕರ್ನಾಟಕ ಮಾತ್ರ. ಅದಕ್ಕಾಗಿ ಈ ಭಾಗದ ಜನತೆಗೆ ನಾನು ಹೃದಯ ತುಂಬಿ ಕೃತಜ್ಞತೆ ಸಲ್ಲಿಸಿ ಅಭಿನಂದಿಸುತ್ತೇನೆ. ನಮ್ಮ ಮುಂದಿರುವ ಲೋಕ ಸಭಾ ಚುನಾವಣೆಯಲ್ಲಿ ವಿಶ್ವಗುರು ಭಾರತವನ್ನಾಗಿಸುವ ಸಂಕಲ್ಪ ತೊಟ್ಟು ಮುನ್ನಡೆದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಹಗಲಿರುಳು ಶ್ರಮಿಸಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಕು.ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷ ಸುದರ್ಶನ್, ಮೇಯರ್ ಸುಧೀರ್ ಶೆಟ್ಟಿ, ಚಲನಚಿತ್ರನಟಿ ತಾರಾ ಅನುರಾಧಾ, ಮೋನಪ್ಪ ಭಂಡಾರಿ, ಉದಯಕುಮಾರ್ ಶೆಟ್ಟಿ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.
ದಕ್ಷಿಣ ಕನ್ನಡ ಪ್ರವಾಸದ ವೇಳೆ ವಿಜಯೇಂದ್ರ ಅವರು ಪಕ್ಷದ ಹಿರಿಯ, ಮಾಜಿ ಶಾಸಕ ಯೋಗೀಶ್ ಭಟ್ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
”ನಮ್ಮ ಬೂತ್ – ನಮ್ಮ ಶಕ್ತಿ ಕಾರ್ಯಕರ್ತ ನಮಗೆ ಸ್ಫೂರ್ತಿ” ಎಂಬ ಧ್ಯೇಯ ವಾಕ್ಯದಡಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಡಿಯಾಲ್ ಬೈಲ್ 30 ನೇ ವಾರ್ಡ್’ನ ಬೂತ್ ಸಂಖ್ಯೆ 65 ರ ಅಧ್ಯಕ್ಷ ಯಶವಂತ್ ಕುದ್ರೋಳಿ ಅವರ ನಿವಾಸಕ್ಕೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.