ಮಂಗಳೂರು ಅಪರಾಧ ಸುದ್ದಿಗಳು (ಮಾರ್ಚ್ 9)
Team Udayavani, Mar 9, 2018, 11:27 AM IST
ಕಾರು ಢಿಕ್ಕಿ: ಸಾವು
ಮಂಗಳೂರು: ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಮುಂಭಾಗ ರಾ. ಹೆ. 66ರಲ್ಲಿ ಬುಧವಾರ ರಾತ್ರಿ ಬಸ್‌ಗೆ ಕಾಯುತ್ತಿದ್ದ ಮುಕ್ಕ ನಿವಾಸಿ ರಘುನಾಥ ದೇವಾಡಿಗ (54) ಅವರು ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅವರು ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮೂಲ್ಕಿಯಿಂದ ಸುರತ್ಕಲ್ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ಅವರ ತಲೆ, ಎದೆ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಸಮೀಪದ ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ 10.40 ಕ್ಕೆ ಸಾವನ್ನಪ್ಪಿದರು.
ಟ್ರಾಫಿಕ್ ಉತ್ತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಸೇವಿಸಿ ಸಾವು
ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿ ಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನರಿಮೊಗರು ಕಾಯರ್‌ಮುರೇರು ನಿವಾಸಿ ಗಣೇಶ್ ಗೌಡ (37) ಚಿಕಿತ್ಸೆ ಫಲಕಾರಿಯಾಗದೆ ಮಾ. 7ರಂದು ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲು ತ್ತಿದ್ದ ಗಣೇಶ್ ಜೀವನದಲ್ಲಿ ಜುಗುಪ್ಸೆ ಗೊಂಡು ಮಾ. 6ರಂದು ಮಧ್ಯಾಹ್ನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಪುತ್ತೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಅವರನ್ನು ಬುಧವಾರ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಮೃತರು ಅವಿವಾಹಿತರಾಗಿದ್ದು, ತಾಯಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ಮಾವ ಗೋಪಾಲಕೃಷ್ಣ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ಮೂಲದ ಯುವತಿ ನಾಪತ್ತೆ
ಮಂಗಳೂರು: ಜಪ್ಪಿನ ಮೊಗರು ಪ್ರಜ್ಞಾ ಸ್ವಾಧಾರ ಗೃಹದಲ್ಲಿ ಆಶ್ರಯ ಪಡೆದಿದ್ದ ಹುಬ್ಬಳ್ಳಿ ಮೂಲದ ಯುವತಿ ಪ್ರಿಯಾ (27) ಅವರು ಫೆ. 25 ರಂದು ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಿಯಾ ಗೋಧಿ ಮೈಬಣ್ಣ, ಸುಮಾರು 5.3 ಅಡಿ ಎತ್ತರ, ದಪ್ಪ ಶರೀರ, ದುಂಡು ಮುಖ, ಕಡು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಟಾಪ್ ಧರಿಸಿದ್ದು, ಕನ್ನಡ, ಹಿಂದಿ, ತುಳು ಮಾತನಾಡುತ್ತಾರೆ.
ಈಕೆ ಬಗ್ಗೆ ಮಾಹಿತಿ ಸಿಕ್ಕಿದವರು ನಗರ ಕಂಟ್ರೋಲ್ ರೂಂ ಅಥವಾ ಕಂಕನಾಡಿ ನಗರ ಠಾಣೆಗೆ ತಿಳಿಸ ಬಹುದು.
ಮಲಗಿದಲ್ಲಿಂದ ನಾಪತ್ತೆ : ದೂರು
ಮಂಗಳೂರು: ಕೂಳೂರು- ಕಾವೂರು ರಸ್ತೆಯ ವಿದ್ಯಾನಗರದಲ್ಲಿ ವಾಸ ವಾಗಿರುವ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಹಡಗಲಿಯ ಭೀಮಪ್ಪ ಹುಚ್ಚಣ್ಣವರ ಅವರ ಪುತ್ರ ಈರಪ್ಪ (36) ಕಳೆದ ಫೆಬ್ರವರಿ 15ರಂದು ರಾತ್ರಿ ಮಲಗಿದ್ದ ಲ್ಲಿಂದ ಕಾಣೆಯಾಗಿದ್ದು, ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಈರಪ್ಪ ಅವರು ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.
ಭೀಮಪ್ಪ ಅವರು ಗದಗ ದಿಂದ ಮಂಗ ಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದಾರೆ. ಫೆ. 15ರಂದು ರಾತ್ರಿ ಅವರು ತನ್ನ ಪತ್ನಿ ರೇಣುಕಾ, ಪುತ್ರ ಈರಪ್ಪ ಮತ್ತು ಸೊಸೆ ಅಕ್ಕಮ್ಮ ಅವರ ಜತೆ ಮನೆಯಲ್ಲಿ 9 ಗಂಟೆಗೆ ಮಲಗಿದ್ದು, 11 ಗಂಟೆಗೆ ಎಚ್ಚರ ವಾದಾಗ ಈರಪ್ಪ ಕಾಣೆಯಾಗಿದ್ದರು.
ಈರಪ್ಪ 5.9 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ದೃಢ ಶರೀರ ಹೊಂದಿದ್ದು, ನೀಲಿ ಗೆರೆಗಳ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಮಾತನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.