ಕಾರ್ಮಿಕರಿಂದ ಮ್ಯಾನ್‌ಹೋಲ್ ಸ್ವಚ್ಚತಾ ಕಾರ್ಯ: ಪ್ರಕರಣ ದಾಖಲು
Team Udayavani, Oct 23, 2017, 9:40 AM IST
ಮಂಗಳೂರು: ನಗರದ ಬಂದರ್‌ನ ನೆಲ್ಲಿಕಾಯಿ ರಸ್ತೆಯ ಒಳ ಚರಂಡಿ ವ್ಯವಸ್ಥೆಯ ಮ್ಯಾನ್‌ಹೋಲ್‌ನಲ್ಲಿ ಕಳೆದ ಬುಧವಾರ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ ಬಗ್ಗೆ ಪಾಲಿಕೆಯ ಗುತ್ತಿಗೆದಾರರು ಮತ್ತು ಎಂಜಿನಿಯರ್ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಐಟಿಯು ಸಂಘಟನೆಯ ಯೋಗೀಶ್ ಜಪ್ಪಿನಮೊಗರು ಅವರು ಸಲ್ಲಿಸಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಕಾರ್ಮಿಕರನ್ನು ಒಳ ಚರಂಡಿ ಗುಂಡಿಗೆ ಇಳಿಸ ಬಾರದು ಎಂಬ ನಿಯಮ ಇದ್ದರೂ ಕಾನೂನು ಉಲ್ಲಂಘಿಸಿ ಒಳ ಚರಂಡಿಯ ಬ್ಲಾಕ್ ಸರಿ ಪಡಿಸಲು ದಲಿತ ಸಮುದಾಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಸೌಕರ್ಯಗಳನ್ನು ಒದಗಿಸದೆ ಮ್ಯಾನ್‌ಹೋಲ್‌ಗೆ ಇಳಿಸಿ ಕೆಲಸ ಮಾಡಿಸಲಾಗಿದೆ. ಎಂದವರು ದೂರಿನಲ್ಲಿಐ ತಿಳಿಸಿದ್ದಾರೆ.
ಈ ಬಗ್ಗೆ ಗುತ್ತಿಗೆದಾರ ನಜೀರ್ ಮತ್ತು ಮಹಾನಗರ ಪಾಲಿಕೆಯ ಎಂಜಿನಿಯರ್ ಹಾಗೂ ಪಾಲಿಕೆಯ ಇತರ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರಗಿಸ ಬೇಕು ಎಂದು ಯೋಗೀಶ್ ಜಪ್ಪಿನಮೊಗರು ಅವರು ದೂರಿನಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ 28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.