Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ
Team Udayavani, Jun 29, 2024, 12:42 AM IST
ಮಂಗಳೂರು: ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಒಂದೇ ಕುಟುಂಬದ ಮಹಮ್ಮದ್ ಯಾಸೀರ್, ಮರಿಯಮ್ಮ, ರಿಫಾನಾ, ಆಶಿಯಾ ರಿಯಾನಾ, ಮಂಗಳೂರಿನ ಪಾಂಡೇಶ್ವರ ರೊಸಾರಿಯೊ ಚರ್ಚ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತರಾದ ರಾಮಕುಂಜದ ದೇವರಾಜ್, ಹಾಸನದ ರಾಜು ಹಾಗೂ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಆಘಾತದಿಂದ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಮೂರು ಘಟನೆಯ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿ ಮಾತುಕತೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿ ವಿದ್ಯುತ್ ದುರ್ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.