Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Team Udayavani, Dec 27, 2024, 2:56 PM IST
ಮಂಗಳೂರು: ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ಯು. ಟಿ. ಖಾದರ್ ಸಂತಾಪ ವ್ಯಕ್ತಪಡಿಸಿದರು.
1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತ ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ಅವರ ದೂರದರ್ಶಿತ್ವ ದೇಶವನ್ನು ಆರ್ಥಿಕ ಪುನಶ್ಚೇತನದ ಮಾರ್ಗದಲ್ಲಿ ನಡೆಸಿತು. ಅವರು ವಿದೇಶದಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡುಗಡೆ ಮಾಡಿದ್ದು ಮಾತ್ರವಲ್ಲದೆ, ಅವರ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆಯಿತು ಎಂದರು.
ಇಡೀ ವಿಶ್ವ ಆರ್ಥಿಕತೆಯಿಂದ ಕಂಗಾಲಾದಾಗ ಭಾರತದ ಆರ್ಥಿಕತೆ ದೃಢವಾಗಿತ್ತು ಮತ್ತು ಭಾರತದ ಪ್ರತಿ ಮನೆ ಬಾಗಿಲಲ್ಲೂ ಇಂದು ಆರ್ಥಿಕ ಸ್ವಾತಂತ್ರ್ಯ ಹಾಗೂ ಸ್ವಾವಲಂಬನೆ ಕಂಡುಬಂದಿದ್ದರೆ ಅದು ಅವರ ಕೊಡುಗೆ ಎಂಬುವುದನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಅವರ ಪ್ರಗತಿಪರ ದೃಷ್ಠಿಕೋನ ಮತ್ತು ಅವಿಸ್ಮರಣೀಯ ಕೊಡುಗೆಗಳು ದೇಶದ ಮುಂದಿನ ತಲೆಮಾರಿಗೆ ಸ್ಫೂರ್ತಿಯಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.