ಕಡಬ ತಾಲೂಕು ಉದ್ಘಾಟನೆಗೆ ಎದುರಾಗುತ್ತಿದೆ ಹಲವು ವಿಘ್ನ!


Team Udayavani, Aug 25, 2018, 10:09 AM IST

25-agust-2.jpg

ಕಡಬ: ನೂತನ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸಲು ದಿನ ನಿಗದಿಪಡಿಸಿದರೂ ಪದೇ ಪದೇ ವಿಘ್ನಗಳು ಎದುರಾಗಿ ಉದ್ಘಾಟನೆ ಸಮಾರಂಭ ರದ್ದಾಗುತ್ತಿರುವುದರಿಂದಾಗಿ ತಾಲೂಕು ಅನುಷ್ಠಾನದ ಕುರಿತು ಕಡಬ ಪ್ರದೇಶದ ಜನರ ಮನಸ್ಸಿನಲ್ಲಿ ಆತಂಕ ಮೂಡುವಂತಾಗಿದೆ.

ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಘೋಷಣೆಯಾಗಿದ್ದ ಕಡಬ ನೂತನ ತಾಲೂಕು ಬಳಿಕ ಅನುಷ್ಠಾನವಾಗದೇ ಇದ್ದುದರಿಂದ ಭ್ರಮನಿರಸನಗೊಂಡಿದ್ದ ಕಡಬದ ಜನತೆ ಬಳಿಕ ಸಿದ್ಧರಾಮಯ್ಯ ನೇತೃತ್ವದ ಸರಕಾರವೂ ಈ ಕುರಿತು ಗಮನಹರಿಸದೇ ಇದ್ದಾಗ ತೀವ್ರ ಅಸಮಾಧಾನಗೊಂಡಿದ್ದರು. ಆನಂತರ ಸಿದ್ಧರಾಮಯ್ಯ ಅವರು ಇತರ ನೂತನ ತಾಲೂಕುಗಳೊಂದಿಗೆ ಕಡಬ ತಾಲೂಕನ್ನು ಮತ್ತೆ ಘೋಷಣೆ ಮಾಡಿದಾಗಲೂ ಜನರಲ್ಲಿ ಹಿಂದಿನ ಉತ್ಸಾಹ ಕಂಡುಬಂದಿರಲಿಲ್ಲ.

ಮೂರು ಬಾರಿ ಮುಂದೂಡಿಕೆ
ಬೈಂದೂರು, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳ ಉದ್ಘಾಟನೆ ನಡೆದು ಕಡಬ ತಾಲೂಕು ಉದ್ಘಾಟನೆಯಾಗದೇ ಇದ್ದಾಗ ಕಡಬದ ಜನರಲ್ಲಿ ಆತಂಕ ಆರಂಭವಾಗಿತ್ತು. ಅದರೊಂದಿಗೆ ಬಳಿಕ 3 ಬಾರಿ ಕಡಬ ತಾಲೂಕು ಉದ್ಘಾಟನೆಗೆ ದಿನ ನಿಗದಿಯಾಗಿ ಮುಂದೂಡಲ್ಪಟ್ಟಿರುವುದು ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶೀಘ್ರ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸುವ ಮೂಲಕ ಜನರ ಮನಸ್ಸಿನಲ್ಲಿರುವ ಭೀತಿಯನ್ನು ಹೋಗಲಾಡಿಸುವ ಅಗತ್ಯವಿದೆ.

ತಾಲೂಕು ರದ್ದಾಗಲು ಸಾಧ್ಯವೇ ಇಲ್ಲ
ಹೊಸ ತಾಲೂಕುಗಳ ಕುರಿತು ಸರಕಾರ ಅಧಿಸೂಚನೆ ಹೊರಡಿಸಿರುವುದರಿಂದಾಗಿ ಆತಂಕ ಪಡಬೇಕಾಗಿಲ್ಲ. ಅನ್ಯ ಕಾರಣಗಳಿಂದಾಗಿ ಉದ್ಘಾಟನೆ ಮುಂದೂಡಲ್ಪಟ್ಟಿದೆ. ಯಾವುದೇ ಕಾರಣಕ್ಕೂ ಕಡಬ ತಾಲೂಕು ರದ್ದಾಗಲು ಸಾಧ್ಯವಿಲ್ಲ. ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ತೆರೆಯುವುದರೊಂದಿಗೆ ಶೀಘ್ರ ಕಡಬ ತಾಲೂಕು ಉದ್ಘಾಟನೆಯಾಗಲಿದೆ.
– ಜಾನ್‌ಪ್ರಕಾಶ್‌ ರೋಡ್ರಿಗಸ್‌
ಕಡಬ ತಹಶೀಲ್ದಾರ್‌

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.