ಮರವೂರು ಸೇತುವೆ ಬಿರುಕು: ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇಲ್ಲಿದೆ ರಸ್ತೆ ಮಾಹಿತಿ
Team Udayavani, Jun 15, 2021, 9:05 AM IST
ಮಂಗಳೂರು: ನಗರದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಂಡುಬಂದಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ.
ಈ ಸೇತುವೆಯು ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ನೆಲ್ಲಿ ತೀರ್ಥ, ಅದ್ಯಪಾಡಿಗೆ ಸಂಪರ್ಕ ಸಾಧಿಸುವ ಪ್ರಮುಖ ಕೊಂಡಿಯಾಗಿದೆ. ಸದ್ಯ ಸೇತುವೆ ಬಿರುಕಿನಿಂದ ಈ ಸಂಪರ್ಕ ಕೊಂಡಿ ತಪ್ಪಿದಂತಾಗಿದ್ದು, ಹಲವರಿಗೆ ಇದರ ಪರಿಣಾಮ ಬೀರಲಿದೆ.
ಇದನ್ನೂ ಓದಿ:ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ
ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕ ಪ್ರತಿದಿನ ನೂರಾರು ವಾಹನಗಳು ಈ ದಾರಿಯಲ್ಲಿ ಸಾಗುತ್ತದೆ. ಸದ್ಯ ಸೇತುವೆಯಲ್ಲಿ ಬಿರುಕು ಬಿದ್ದ ಕಾರಣ ಮಂಗಳೂರಿನ ಕಾವೂರಿನಿಂದ ಏರ್ ಪೋರ್ಟ್ ಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಬಜಪೆ ವಿಮಾನ ನಿಲ್ದಾಣಕ್ಕೆ ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ -ಗುರುಪುರ ರಸ್ತೆಯಾಗಿ ಎರ್ ಪೂರ್ಟ್ ಗೆ ತೆರಳಲು ಸೂಚನೆ ನೀಡಲಾಗಿದೆ. ಉಡುಪಿ ಕಡೆಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ಏರ್ ಪೋರ್ಟ್ ತೆರಳಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಜೂ.15ರಿಂದ CETಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ : ಜು.10 ಕೊನೆಯ ದಿನ
ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಇಲ್ಲಿ ಹೊಸ ಸೇತುವೆ ಕಾಮಗಾರಿ ಹಿನ್ನೆಲೆ ನೀರಿನ ಹರಿವು ಒಂದೇ ಭಾಗದಲ್ಲಿ ಹೆಚ್ಚಾಗಿತ್ತು, ಹೀಗಾಗಿ ಸೇತುವೆಯ ಮೊದಲ ಅಂಕಣದ ( ಮೊದಲ ಪಿಲ್ಲರ್ ಬಳಿ) ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.