ಮಾ. 5: ಉಪ್ಪಿನಂಗಡಿ ಗ್ರಾ.ಪಂ. ಕಟ್ಟಡ ಉದ್ಘಾಟನೆ

Team Udayavani, Mar 2, 2018, 4:36 PM IST

2-March-17.jpg

ಉಪ್ಪಿನಂಗಡಿ: ಮಿನಿ ವಿಧಾನ ಸೌಧದ ವಿಶಿಷ್ಟ ಕಲ್ಪನೆಯಲ್ಲಿ ಒಂದೇ ಸೂರು ಅಡಿಯಲ್ಲಿ ಎಲ್ಲ ಕಚೇರಿಗಳನ್ನು ಹೊಂದಿರುವ
ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ನೂತನ ಕಟ್ಟಡವನ್ನು ಮಾ. 5ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ. ಪಾಟೀಲ್‌ ಉದ್ಘಾಟಿಸಲಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ತಿಳಿಸಿದರು.

ಗ್ರಾ.ಪಂ. ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಭಾಂಗಣ ಉದ್ಘಾಟಿಸಲಿದ್ದು, ಶಾಸಕಿ ಹಾಗೂ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಗ್ರಾಮ ಕರಣಿಕರ ಕಚೇರಿಯನ್ನು ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಗೋದಾಮು ಕಟ್ಟಡ ಉದ್ಘಾಟಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಆಹಾರ ಮತ್ತು ನಾಗರಿಕ ಸೇವಾ ಸಚಿವ ಯು.ಟಿ. ಖಾದರ್‌, ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬೆಳ್ತಂಗಡಿ ಶಾಸಕ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ವಸಂತ ಬಂಗೇರ, ಸುಳ್ಯ ಶಾಸಕ ಅಂಗಾರ, ವಿಧಾನ ಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್‌ ಚಂದ್ರ ಶೆಟ್ಟಿ, ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌, ಐವನ್‌ ಡಿ’ಸೋಜಾ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್‌ ಹಮೀದ್‌, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದರು.

ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌, ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಜಿ.ಪಂ. ಕಾರ್ಯನಿರ್ವಾಹಕ ಎಂಜಿನಿಯರ್‌ ರವೀಂದ್ರ ಕಿಣಿ, ಪುತ್ತೂರು ಸಹಾಯಕ ಕಮೀಷನರ್‌ ಎಚ್‌.ಕೆ. ಕೃಷ್ಣಮೂರ್ತಿ, ತಾ.ಪಂ. ಇಒ ಜಗದೀಶ್‌ ಎಸ್‌., ತಹಶೀಲ್ದಾರ್‌ ಅನಂತ ಶಂಕರ, ಜಿ.ಪಂ. ಸ.ಕಾ.ನಿ. ಎಂಜಿನಿಯರ್‌ ರೋಹಿದಾಸ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ನವೀನ್‌ ಭಂಡಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಘುನಾಥ ರೈ, ಮಾಲಿಕ್‌ ದೀನಾರ್‌ ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ, ದೀನರ ಕನ್ಯಾ ಮಾತೆ ದೇವಾಲಯದ ಧರ್ಮಗುರು ರೋನಾಲ್ಡ್‌ ಪಿಂಟೋ, ಶ್ರೀ ವೆಂಕಟರಮಣ ದೇವಸ್ಥಾನ ಆಡಳಿತ ಮೊಕ್ತೇಸರ ಬಿ. ಗಣೇಶ್‌ ಶೆಣೈ, ಪುತ್ತೂರು ನಿರ್ಮಾಣ್‌ ಆರ್ಕಿಟೆಕ್ಸ್‌ ಸಂಸ್ಥೆಯ ಸಚ್ಚಿದಾನಂದ, ಪಿಡಬ್ಲ್ಯುಡಿ ಗುತ್ತಿಗೆದಾರ ಬಿ. ಅಬ್ದುಲ್‌ ಖಾದರ್‌ ಗೌರವ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

600 ಮಂದಿ ಕುಳಿತುಕೊಳ್ಳುವ ಸಭಾ ಭವನ
ನೂತನ ಕಟ್ಟಡದಲ್ಲಿ 500ರಿಂದ 600 ಮಂದಿ ಕುಳಿತುಕೊಳ್ಳುವ ವಿಶಾಲವಾದ ಮತ್ತು ಸುಸಜ್ಜಿತ ವ್ಯವಸ್ಥೆಯನ್ನು ಒಳಗೊಂಡ ಸಭಾಭವನ ಇರುತ್ತದೆ. ಇದೇ ಕಟ್ಟಡದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಕರಣಿಕರ ಕಚೇರಿ, ಜಿ.ಪಂ. ಎಂಜಿನಿಯರ್‌ ಕಚೇರಿ, ವಿದ್ಯುತ್‌ ಬಿಲ್‌ ಸ್ವೀಕಾರ ಕೇಂದ್ರ ಹಾಗೂ ಅಂಗವಿಕಲರ ಗುರುತು ಚೀಟಿ ಕೇಂದ್ರ, ಜೆರಾಕ್ಸ್‌, ಅರ್ಜಿ ನಮೂನೆ ಕೇಂದ್ರ ಇರುತ್ತದೆ ಎಂದರು. ಗ್ರಾ.ಪಂ. ಸದಸ್ಯರಾದ ಗೋಪಾಲ ಹೆಗ್ಡೆ, ಯು. ಕೆ. ಇಬ್ರಾಹಿಂ, ರಮೇಶ್‌ ಭಂಡಾರಿ, ಪಿಡಿಒ ಅಬ್ದುಲ್ಲಾ ಅಸಾಫ್, ಕಾರ್ಯದರ್ಶಿ ಶಾರದಾ ಉಪಸ್ಥಿತರಿದ್ದರು.

ನೀರು ಪೋಲು ಮಾಡಿದರೆ ಕಠಿನ ಕ್ರಮ
ಬೇಸಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಯಾರೂ ನೀರು ಪೋಲು ಮಾಡುವಂತಿಲ್ಲ. ಕೆಲವರು ಹೂಗಿಡ, ಇತರೇ ಗಿಡಗಳಿಗೆ ಕುಡಿಯುವ ನೀರು ಬಳಸುತ್ತಿದ್ದಾರೆ, ಇನ್ನೂ ಕೆಲವರು ಕಟ್ಟಡ ನಿರ್ಮಾಣಕ್ಕೂ ಬಳಸುತ್ತಿದ್ದಾರೆ. ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು, ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ಎಚ್ಚರಿಸಿದ್ದಾರೆ.

14 ಲಕ್ಷ ರೂ. ವೆಚ್ಚದ ಗೋದಾಮು ಕಟ್ಟಡ
ಉದ್ಯೋಗ ಖಾತರಿ ಯೋಜನೆಗೆ ಅಡಿಯಲ್ಲಿ 14 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ನಿರ್ಮಾಣ್‌ ಆರ್ಕಿಟೆಕ್ಸ್‌ ಸಂಸ್ಥೆಯ ಸಚ್ಚಿದಾನಂದ ಅವರ ವಿಶೇಷ ವಿನ್ಯಾಸದೊಂದಿಗೆ ಆಕರ್ಷಕವಾಗಿ ಗೋದಾಮು ಕಟ್ಟಡ ನಿರ್ಮಿಸಲಾಗಿದೆ. ಗ್ರಾ.ಪಂ.ನ ಎಲ್ಲ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಸುಂದರ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.

ಟಾಪ್ ನ್ಯೂಸ್

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.