ಮಾ. 31ರೊಳಗೆ ಬಿಎಸ್-4 ವಾಹನಗಳ ನೋಂದಣಿ ಕಡ್ಡಾಯ
Team Udayavani, Mar 15, 2020, 6:39 AM IST
ಮಂಗಳೂರು: ಪರಿಸರ ಮಾಲಿನ್ಯ ಕಡಿಮೆಗೊಳಿಸಲು ಎ. 1ರಿಂದ “ಭಾರತ್ ಸ್ಟೇಜ್-6′ (ಬಿಎಸ್-6) ವಾಹನಗಳನ್ನು ಮಾತ್ರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಲಾಗುವುದು ಎಂದು ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಎ. ರಾಮಕೃಷ್ಣ ರೈ ಅವರ ಪ್ರಕಟನೆ ತಿಳಿಸಿದೆ.
ಸುಪ್ರೀಂ ಕೋರ್ಟ್ ಹಾಗೂ ಸಾರಿಗೆ ಆಯುಕ್ತರ ಆದೇಶದ ಅನ್ವಯ ಎ. 1ರಿಂದ ಭಾರತ್ ಸ್ಟೇಜ್-4 (ಬಿಎಸ್-4) ಮಾಪನದ ವಾಹನ ಮಾರಾಟ ಹಾಗೂ ನೋಂದಣಿ ಮಾಡುವಂತಿಲ್ಲ. ಹೀಗಾಗಿ ಬಿಎಸ್-4 ಮಾಪನದ ವಾಹನಗಳನ್ನು ಖರೀದಿಸಿ, ಇದುವರೆಗೂ ನೋಂದಣಿ ಮಾಡಿಸಿಕೊಳ್ಳದೇ ಇರುವವರು ವಾಹನಗಳ ದಾಖಲೆಗಳನ್ನು ಸಲ್ಲಿಸಿ ಮಾ. 31ರೊಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹಲವು ಜೆಸಿಬಿ, ಎಕ್ಸವೇಟರ್, ಕ್ರೇನ್ ಹಾಗೂ ಇನ್ನಿತರ ಸಾರಿಗೆ/ಖಾಸಗಿ ವಾಹನಗಳು ಇದುವರೆಗೂ ನೋಂದಾಯಿಸದೇ ಇರುವುದು ಗಮನಕ್ಕೆ ಬಂದಿದೆ. ಅಂತಹ ವಾಹನಗಳ ಮಾಲೀಕರು, ತಮ್ಮ ವಾಹನಗಳ ದಾಖಲಾತಿ ಸಲ್ಲಿಸಿ, ಮಾ. 31ರೊಳಗೆ ನೋಂದಾಯಿಸಿ ಕೊಳ್ಳಬೇಕು. ಎ. 1ರಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಭಾರತ್-ಸ್ಟೇಜ್-6(ಬಿಎಸ್6) ವಾಹನಗಳನ್ನು ಮಾತ್ರ ನೋಂದಣಿ ಮಾಡಿಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ನೋಂದಣಿ ಹೊಂದಿದ್ದರೂ ಸಹ ಅಂತಹ ವಾಹನಗಳನ್ನು ಮಾ. 31ರೊಳಗೆ ನೋಂದಾಯಿಸಿಕೊಳ್ಳಬೇಕು. ಅನಂತರ ನೋಂದಣಿ ರಹಿತ ಭಾರತ್ ಸ್ಟೇಜ್-4 ವಾಹನಗಳು ರಸ್ತೆಯಲ್ಲಿ ಓಡಾಡುತ್ತಿರುವುದು ಕಂಡು ಬಂದಲ್ಲಿ ಅಂತಹ ವಾಹನಗಳ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.