ಮರ್ದಾಳ: ಸಾರ್ವಜನಿಕ ಶೌಚಾಲಯದ ದುರವಸ್ಥೆ
Team Udayavani, Jul 27, 2018, 12:05 PM IST
ಕಡಬ : ಮರ್ದಾಳ ಪೇಟೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಕೇವಲ ಎರಡು ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಸಾರ್ವಜನಿಕ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕರು ಉಪಯೋಗಿಸಲು ಅಸಾಧ್ಯವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ದಾಳ ಪೇಟೆ ಅಭಿವೃದ್ಧಿಹೊಂದುತ್ತಿರುವ ಪ್ರದೇಶವಾಗಿದ್ದು, ಪೇಟೆಯೂ ಬೆಳೆಯುತ್ತಿದೆ. ದಿನಂಪ್ರತಿ ಯಾತ್ರಾರ್ಥಿಗಳು ಸೇರಿದಂತೆ ಸಾವಿರಾರು ಜನರ ಮರ್ದಾಳದ ಮೂಲಕ ಈ ರಸ್ತೆಯಲ್ಲಿ ಪ್ರಯಾಣಿಸುತ್ತಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಉಪಯೋಗಕ್ಕೆಂದು ಮರ್ದಾಳ ಪೇಟೆಯಲ್ಲಿ ಪಂಚಾಯತ್ ಕಚೇರಿಯ ಕೂಗಳತೆಯ ದೂರದಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಆ ಶೌಚಾಲಯವನ್ನು ಸಮರ್ಪಕವಾಗಿ ಶುಚಿಗೊಳಿಸದೇ ಇರುವುದ ರಿಂದ ಶೌಚಾಲಯವನ್ನು ಉಪ ಯೋಗಿಸುವುದು ಬಿಡಿ, ಆ ಪ್ರದೇಶದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ ಎನ್ನುತ್ತಾರೆ ಸ್ಥಳೀಯ ಮುಂದಾಳು ಭವಾನಿಶಂಕರ ಅವರು.
ಗ್ರಾಮ ಸಭೆಯಲ್ಲಿ ನಾನು ಈ ಬಗ್ಗೆ ಮಾತನಾಡಿ ಶೌಚಾಲಯವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಯೋಗ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದ್ದೆ. ಆದರೆ ಗ್ರಾಮಸಭೆ ಕಳೆದು ಹಲವು ದಿನಗಳು ಕಳೆದರೂ ಪಂಚಾಯತ್ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒರತೆಯ ಸಮಸ್ಯೆ
ನೀರಿನ ಒರತೆಯಿಂದಾಗಿ ಶೌಚಾಲಯದ ಗುಂಡಿಯಲ್ಲಿ ನೀರು ತುಂಬಿಕೊಂಡು ಗಲೀಜು ನೀರು ಶೌಚಾಲಯದೊಳಗೆ ಉಕ್ಕುತ್ತಿರುವುದರಿಂದಾಗಿ ಸಮಸ್ಯೆ ಎದುರಾಗಿದೆ. ಸ್ವಚ್ಛತಾ ಕಾರ್ಮಿಕರು ಕೂಡ ಮಳೆ ಕಡಿಮೆಯಾಗಿ ನೀರಿನ ಒರತೆ ಕಡಿಮೆಯಾಗುವ ತನಕ ಏನೂ ಮಾಡಲು ಸಾಧ್ಯವಿಲ್ಲವೆಂದು ಕೈಚೆಲ್ಲಿದ್ದಾರೆ. ಆದುದರಿಂದ ಮಳೆ ಕಡಿಮೆಯಾದ ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
– ಲಲಿತಾ ಎಂ. ರೈ, ಅಧ್ಯಕ್ಷರು, ಮರ್ದಾಳ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.