ವಸ್ತು ವಿಜ್ಞಾನ, ಜೈವಿಕ ಭೌತಶಾಸ್ತ್ರ ಸಂಶೋಧನೆಗಳು ಅಗತ್ಯ
Team Udayavani, Jan 24, 2018, 10:19 AM IST
ಮಂಗಳಗಂಗೋತ್ರಿ: ವಸ್ತು ವಿಜ್ಞಾನ, ಜೈವಿಕ ಭೌತಶಾಸ್ತ್ರದಲ್ಲಿ ವಿಪುಲ ಅವಕಾಶಗಳಿದ್ದು, ಸುಧಾರಣೆಗಳು ನಡೆಯುತ್ತಿವೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳು ನಡೆದರೆ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಆಸ್ಟ್ರೇಲಿಯಾ ಕ್ಯಾನಿಬೇರಾದ ರಾಷ್ಟ್ರೀಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ| ಚೆನ್ನುಪತಿ ಜಗದೀಶ್ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯ ಇದರ ಭೌತಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ವಸ್ತು ವಿಜ್ಞಾನ ಮತ್ತು ಜೈವಿಕ ಭೌತಶಾಸ್ತ್ರ ದ ಇತ್ತೀಚಿನ ಬೆಳವಣಿಗೆಗಳು (ಆರ್‌ಎಎಂಎಸ್‌ಬಿ) ಎಂಬ ವಿಷಯದ ಬಗ್ಗೆ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಆಡಿಟೋರಿಯಂನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಕ್ಷೇತ್ರ ಬೆಳವಣಿಗೆ ಯಾಗಬೇಕಾದರೆ ಆ ಕ್ಷೇತ್ರದಲ್ಲಿ ಸಂಶೋಧನೆಗಳು ಅಗತ್ಯ. ನಮ್ಮ ನಿತ್ಯ ಜೀವನದಲ್ಲಿ ಬಳಸುವ ವಸ್ತುಗಳಿಗೆ ಸಂಬಂಧಿಸಿದಂತೆ ಈ ಸಂಶೋಧನೆಗಳು ಸಹಕಾರಿಯಾಗಲಿದ್ದು, ಕಾರ್ಯಾಗಾರಗಳಿಂದ ಉತ್ತಮ ಮಹಿತಿ ಪಡೆಯಬಹುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿ.ವಿ.ಯ ಉಪ ಕುಲಪತಿ ಪ್ರೊ| ಕೆ. ಭೈರಪ್ಪ ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಸಚಿವ ಪ್ರೊ| ಬಿ.ಎಸ್. ನಾಗೇಂದ್ರ ಪ್ರಕಾಶ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೊ| ಯೆರೊಲ್ ನಾರಾಯಣ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಶೋಧನ ವಿದ್ಯಾರ್ಥಿನಿ ಪಾರ್ವತಿ ವೇಣು ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ರವಿಚಂದ್ರ ಆಚಾರ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.