![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2024, 11:07 PM IST
ಮಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದು ಖಂಡನೀಯ. ಸಚಿವರು ಸಾಂವಿಧಾನಿಕ ಹುದ್ದೆ ಹಾಗೂ ಎಸ್‌ಸಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ.
ಸಚಿವರು ತತ್‌ಕ್ಷಣ ಕ್ಷಮೆ ಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹಿಸಿದರು.
ಸೋಮವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯ ವನ್ನು ಕಾಂಗ್ರೆಸ್ ಓಟ್ ಬ್ಯಾಂಕ್ ಆಗಿ ಮಾತ್ರ ಬಳಸುತ್ತಿದೆ. ದಲಿತರ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಕಾಳಜಿ ಇಲ್ಲ.
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ನಿವೇಶನಗಳ ನಿಯಮಬಾಹಿರ ಮತ್ತು ಅಕ್ರಮ ಮಂಜೂರಾತಿ ಕುರಿತು ವಿಧಾನ ಪರಿಷತ್ ವಿಪಕ್ಷ ನಾಯಕರು ಮಾಡಿರುವ ಆರೋಪಕ್ಕೆಸೂಕ್ತ ಉತ್ತರ ನೀಡುವ ಬದಲು ಅವರನ್ನು ಅವಹೇಳನಕಾರಿ ಯಾಗಿ ನಿಂದಿಸಿರುವುದು ಸರಿಯಲ್ಲ ಎಂದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೂ ಕಾಂಗ್ರೆಸ್ ಅವಮಾನಿಸಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ವಿರುದ್ಧ ಕಾಂಗ್ರೆಸಿಗರು ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಇಂಥ ವರ್ತನೆ ಖಂಡನೀಯ ಎಂದು ಹೇಳಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವ ಧಿಯಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಒಂದೂವರೆ ವರ್ಷ ಕಳೆದರೂ ಕಾಂಗ್ರೆಸ್ ತನಿಖೆ ನಡೆಸಿಲ್ಲ. ಈಗ ಕಾಂಗ್ರೆಸ್‌ನ ಹಗರಣಗಳು ಹೊರಬಂದಾಗ ಬಿಜೆಪಿ ವಿರುದ್ಧ ಬ್ಲ್ಯಾಕ್‌ವೆುàಲ್ ಮಾಡುತ್ತಿದ್ದಾರೆ ಎಂದರು.
ಉಪಮೇಯರ್ ಸುನೀತಾ, ಬಿಜೆಪಿ ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈ, ಅರುಣ್ ಶೇಟ್ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಅನೇಕರಿದ್ದು, ಮುಖ್ಯಮಂತ್ರಿ ಹುದ್ದೆ ಅಲುಗಾಡುತ್ತಿದೆ. ಕಾಂಗ್ರೆಸ್ ಪಕ್ಷದೊಳಗಿನ ಜಂಜಾಟದ ಪರಿಣಾಮವಾಗಿ ಸರಕಾರದ ಹಗರಣಗಳು ಹೊರಬರುತ್ತಿವೆ ಎಂದು ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.