ದಡಾರ, ರುಬೆಲ್ಲಾ ಲಸಿಕೆ ಅಪಪ್ರಚಾರ ಮಾಡಿದರೆ ಕ್ರಮ
Team Udayavani, Feb 3, 2017, 3:45 AM IST
ಮಂಗಳೂರು: ದಡಾರ ಮತ್ತು ರುಬೆಲ್ಲಾ ರೋಗ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜಂಟಿ ಯೋಜನೆಯಡಿ ಆರೋಗ್ಯ ಇಲಾಖೆ ವತಿಯಿಂದ ಫೆ. 7ರಿಂದ ಮಾ. 3ರ ವರೆಗೆ 9 ತಿಂಗಳಿಧಿನಿಂದ 15 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಸಚಿವ ಯು.ಟಿ. ಖಾದರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಬಗ್ಗೆ ಕೆಲವರು ಅಪಪ್ರಚಾರ, ಗೊಂದಲ ನಡೆಸುತ್ತಿರುವುದು ಕಂಡುಬಂದಿದೆ. ಇಂತಹ ಅಪಪ್ರಚಾರ ಮಾಡುವುದು, ಸಂದೇಶಗಳನ್ನು ವಾಟ್ಸಾಪ್‌ಗ್ಳಲ್ಲಿ ಹಾಕುವುದು, ಫಾರ್ವರ್ಡ್ ಮಾಡುವುದು ಮುಂತಾದವುಗಳ ವಿರುದ್ಧ ಕಾನೂನು ಕ್ರಮಗಳನ್ನು ಸಂಬಂಧಪಟ್ಟ ಇಲಾಖೆ ವತಿಧಿಯಿಂದ ಕೈಗೊಳ್ಳಲಾಗುವುದು ಎಂದರು.
ದಡಾರ-ರುಬೆಲ್ಲಾ ರೋಗ ಬರದಂತೆ ತಡೆಗಟ್ಟಲು ಉತ್ತಮ ಮತ್ತು ಪರಿಣಾಮಕಾರಿಯಾಗಿರುವ ಎಂ.ಆರ್. ಲಸಿಕೆ ನೀಡಲಾಗುತ್ತದೆ. ಇದರ ಬಗ್ಗೆ ಪೋಷಕರಲ್ಲಿ ಯಾವುದೇ ಗೊಂದಲ ಬೇಡ. ಎಂ.ಆರ್. ಲಸಿಕೆ ಸುರಕ್ಷಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕರಿಸಿದ ಲಸಿಕೆಯಾಗಿದೆ ಎಂದು ಅವರು ವಿವರಿಸಿದರು.
ಜಿಲ್ಲಾಧಿಕಾರಿ ಡಾ| ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.