ಮುಖ್ಯಮಂತ್ರಿ ಭೇಟಿ: ಸಿದ್ಧತೆ ಪರಿಶೀಲನೆ
Team Udayavani, Jan 1, 2018, 1:11 PM IST
ಬೆಳ್ತಂಗಡಿ : ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನಿಂದ ರಸ್ತೆ ಮೂಲಕ ಬರುವ ಬದಲು ಜ. 7ರಂದು ಶಿವಮೊಗ್ಗದಿಂದ ನೇರವಾಗಿ ಬೆಳ್ತಂಗಡಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಹೆಲಿಪ್ಯಾಡ್ ಗಾಗಿ ಶಾಸಕ ಕೆ. ವಸಂತ ಬಂಗೇರ ಅವರೊಂದಿಗೆ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಕ್ರೀಡಾಂಗಣವನ್ನು ವೀಕ್ಷಿಸಿದರು.
ಶಾಸಕರ ಜತೆಗೆ ಜಿಲ್ಲಾಧಿಕಾರಿ ಅವರು ವೀಕ್ಷಣೆ ನಡೆಸಿ, ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆಯಾಗಿದೆ. ಭೇಟಿ ದಿನ ನಡೆಸುವ ಕಾಮಗಾರಿಗಳ ಉದ್ಘಾಟನೆಯ ಸಿದ್ಧತೆಯನ್ನು ಶನಿವಾರ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪರಿಶೀಲನೆ ನಡೆಸಿದರು.
ಸಮಾಲೋಚನೆ
ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆಯಲ್ಲಿ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಾಲೋಚನ ಸಭೆ ನಡೆಯಿತು. ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿಗಳ ಆಗಮನ, ಸಭಾ ವೇದಿಕೆ ಆಸನ ವ್ಯವಸ್ಥೆ ಕುರಿತು ಕಂದಾಯ, ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.
ಸಭೆಗೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪ.ಪಂ.ಗೆ ಸೂಚಿಸಿದರು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿ, ಕಾನೂನು ಸುವ್ಯವಸ್ಥೆ, ಸ್ವತ್ಛತೆಯ ಬಗ್ಗೆ ಗಮನ ನೀಡ ಬೇಕು. ಫಲಾನುಭವಿಗಳು ಹಾಜರಿರುವಂತೆ ಎಲ್ಲ ಇಲಾಖೆಗಳು ಗಮನಿಸಬೇಕು. ಎಲ್ಲ ಇಲಾಖೆಯವರು ಒಂದೇ ತಂಡವಾಗಿ
ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಕೆ. ವಸಂತ ಬಂಗೇರ ಅವರು, ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಧಿಕಾರಿಗಳು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು. ಎಲ್ಲ ಇಲಾಖೆಗಳಿಂದಲೂ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮುತುವರ್ಜಿವಹಿಸಬೇಕು ಎಂದರು.
ಸಭೆಯಲ್ಲಿ ಪ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ ಮೂರ್ತಿ, ತಹಶೀಲ್ದಾರ್ ಸಣ್ಣ ರಂಗಯ್ಯ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಬಸವರಾಜ್ ಅಯ್ಯಣ್ಣನವರ್, ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಜಿ.ಪಂ.
ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಆರ್. ನರೇಂದ್ರ ಮತ್ತಿತರರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಕಾರ್ಯಕ್ರಮ
ಮುಖ್ಯಮಂತ್ರಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು ಜ. 7 ರಂದು ಶಿವಮೊಗ್ಗದಿಂದ ನೇರವಾಗಿ 10.40ರ ಸುಮಾರಿಗೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಅವರು ಮೊದಲಿಗೆ ಪ.ಪಂ.ನ ಕುಡಿಯುವ ನೀರಿನ ಕಾಮಗಾರಿ ಉದ್ಘಾಟಿಸಿ, ಮಿನಿ ವಿಧಾನ ಸೌಧ ಸಹಿತ ತಾಲೂಕಿನ ವಿವಿಧೆಡೆಗಳ ಸುಮಾರು 76 ಕೋ. ರೂ.ಗಳ 17 ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ತಾಲೂಕಿನ
ವಿವಿಧ ಇಲಾಖೆಗಳ ಸೌಲಭ್ಯಗಳನ್ನು 1,800 ಮಂದಿ ಫಲಾನುಭವಿಗಳಿಗೆ ವಿತರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.