ವೈದ್ಯರಿಂದ ಬಿಜೆಪಿ ನಾಯಕರ ಭೇಟಿ
Team Udayavani, Nov 12, 2017, 3:38 PM IST
ಮಹಾನಗರ: ಖಾಸಗಿ ಆಸ್ಪತ್ರೆಗಳಿಗೆ ನಿಯಂತ್ರಣ ಹೇರಲು ಸರಕಾರ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ (ಕೆಪಿಎಂಇ) ಮಸೂದೆ ಯನ್ನು ಯಾವುದೇ ಕಾರಣಕ್ಕೆ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಸೂದೆ ವಿರೋಧಿಸಿ ಮಂಗಳೂರಿನ ವೈದ್ಯರ ನೇತೃತ್ವದ ನಿಯೋಗವೊಂದು ಯಡಿಯೂರಪ್ಪ ಅವರನ್ನು ಗುರುವಾರ ನಗರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭ ಬಿಎಸ್ವೈ ಈ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ.
ವೈದ್ಯ, ರೋಗಿಯ ಸಂಬಂಧಕ್ಕೆ ಧಕ್ಕೆ
ವೈದ್ಯರಿಗೆ, ರೋಗಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಮಾರಕವಾಗಿ ವೈದ್ಯ- ರೋಗಿಯ ಸಂಬಂಧ ಹಳಸುವಂತೆ ಮಾಡುವ ಈ ಕಾನೂನು ಸರಿ ಇಲ್ಲ. ಇದನ್ನು ಸದನದಲ್ಲಿ ಈ ಹಿಂದಿ ನಂತೆಯೇ ಖಡಾಖಂಡಿತವಾಗಿ ಖಂಡಿಸಲಿದ್ದೇವೆ ಎಂದು ಯಡಿಯೂರಪ್ಪ ಭರವಸೆ ನೀಡಿರುವ ಬಗ್ಗೆ ನಿಯೋಗ ವಿವರಿಸಿದೆ. ಬಿಜೆಪಿ ಮುಖಂಡರಾದ ಸದಾನಂದ ಗೌಡ, ಸಿ.ಎಂ. ಉದಾಸಿ, ಸಿಟಿ ರವಿ, ರವಿ ಕುಮಾರ್, ನಳಿನ್ ಕುಮಾರ್ ಕಟೀಲು ಅವರಿಗೂ ನಿಯೋಗ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಭಾರತೀಯ ವೈದ್ಯ ಸಂಘದ ಕರಾವಳಿ ವಿಭಾಗ ಸಂಚಾಲಕರಾದ ಡಾ| ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಐಎಂಎ ಮಂಗಳೂರು ಅಧ್ಯಕ್ಷ ಡಾ| ಕೆ. ರಾಮಚಂದ್ರ ಕಾಮತ್, ಮಾಜಿ ಅಧ್ಯಕ್ಷ ಡಾ| ರಾಘವೇಂದ್ರ ಭಟ್, ನಿಯೋಜಿತ ಅಧ್ಯಕ್ಷ ಡಾ| ಸಚ್ಚಿದಾನಂದ ರೈ, ಆಸ್ಪತ್ರೆಯ ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ ಡಾ| ಪ್ರಶಾಂತ್ ಮಾರ್ಲ, ಎಎಂಸಿ ವೈದ್ಯ ಸಂಘಟನೆಯ ಡಾ| ಯೂಸುಫ್ ಕುಂಬ್ಳೆ, ಐಎಂಎ ಟ್ರಸ್ಟ್ ಅಧ್ಯಕ್ಷ ಡಾ| ದಿವಾಕರ್
ರಾವ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.