ಸುಳ್ಯ ನಗರ ಪಂಚಾಯತ್ ನಲ್ಲಿ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆ
Team Udayavani, Jul 18, 2018, 12:05 PM IST
ಸುಳ್ಯ : ಅಧಿಕಾರಿಗಳು, ಜನಪ್ರತಿನಿಧಿಗಳ ಜವಬ್ದಾರಿ, ಆಡಳಿತ ನಿಯಮದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ನ.ಪಂ.ನಲ್ಲಿ ಒಂದು ತಾಸಿಗೂ ಮಿಕ್ಕಿ ಪಾಠ ಮಾಡಿದರು! ಮಂಗಳವಾರ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಗರ ಪಂಚಾಯತ್ ಸದಸ್ಯರ, ಅಧಿಕಾರಿಗಳ ಸಭೆಯಲ್ಲಿ ಅವರು ಪ್ರಗತಿ, ಕುಂದು ಕೊರತೆ ಸಮಸ್ಯೆ ಆಲಿಸಿ ಕಾನೂನಿನಲ್ಲಿರುವ ಅವಕಾಶಗಳ ಬಗ್ಗೆ ಸಾವಧಾನದಿಂದಲೇ ವಿವರಿಸಿದರು. ಈ ಸಭೆಯಲ್ಲಿ ಎಚ್ಚರಿಸುವ ಪ್ರಯತ್ನ ಮಾಡಿದ್ದೇನೆ. ಮುಂದಿನ ಬಾರಿ ಭೇಟಿ ನೀಡಿದಾಗ ಇಂತಹ ಸಮಸ್ಯೆ ಪುನರಾವರ್ತನೆ ಆದಲ್ಲಿ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.
ಸದಸ್ಯೆ ಪ್ರೇಮಾ ಟೀಚರ್ ಮಾತನಾಡಿ, ಜನರ ಬೇಡಿಕೆಗಳನ್ನು ಜನಪ್ರತಿನಿಧಿಗಳು ಸಭೆಯ ಮುಂದಿಡುತ್ತಾರೆ. ಅದಕ್ಕೆ ಸ್ಪಂದಿಸುವ ಹೊಣೆಗಾರಿಕೆ ಅಧಿಕಾರಿಗಳದ್ದು. ಆ ಕೆಲಸ ಸಮರ್ಪಕವಾಗಿ ಆಗಬೇಕು ಎಂದರು. ಪ್ರತಿಕ್ರಿಯಿಸಿದ ಕೋಟ, ಸದಸ್ಯರು ಜನರ ಪ್ರತಿನಿಧಿಗಳು. ಬೇಡಿಕೆ ಅನುಷ್ಠಾನಕ್ಕೆ ಅಧಿಕಾರಿಗಳು ಇರುತ್ತಾರೆ. ಇಬ್ಬರೂ ಜತೆಯಾಗಿ ಕೆಲಸ ಮಾಡಬೇಕು ಎಂದರು.
ಡಂಪಿಂಗ್ ಯಾರ್ಡ್‌ಗೆ ಭೇಟಿ ನೀಡುವೆ
ನಗರದ ತ್ಯಾಜ್ಯ ಸಂಗ್ರಹದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ವಿಲೇವಾರಿಗೆ ವ್ಯವಸ್ಥೆ ಕುರಿತು ಪ್ರಶ್ನಿಸಿದರು. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾಮದಲ್ಲಿರುವ ಕಲ್ಚೆರ್ಪೆ ಡಂಪಿಂಗ್ ಯಾರ್ಡ್ ಅವ್ಯವಸ್ಥೆಗಳ ಕುರಿತು ಪ್ರಸ್ತಾವಿಸಿದರು. ಅವೈಜ್ಞಾನಿಕ ತ್ಯಾಜ್ಯ ಸಂಗ್ರಹಣೆಯಿಂದ ಪರಿಸರದಲ್ಲಿ ರೋಗ ಭೀತಿ ಹಬ್ಬಿದೆ ಎಂದು ವಿವರಿಸಿದರು.
ಪ್ರಕಾಶ್ ಹೆಗ್ಡೆ ಗರಂ..!
ಅಪಘಾತಕ್ಕೆ ಈಡಾಗಿ ವಿಶ್ರಾಂತಿಯಲ್ಲಿದ್ದ ನ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಸಭೆಗೆ ಆಗಮಿಸಿ, ಚರ್ಚೆಯಲ್ಲಿ ಪಾಲ್ಗೊಂಡರು. ಶಾಂತಿನಗರದಲ್ಲಿ ದಲಿತ ಸಮುದಾಯದ ಶ್ರೀನಿವಾಸ ಅವರಿಗೆ ಶೌಚಾಲಯಕ್ಕೆ ಸಹಾಯಧನ ನೀಡದಿರುವ ಬಗ್ಗೆ ಪ್ರಸ್ತಾವಿಸಿದರು. ಈ ಹಿಂದಿನ ಆಡಳಿತದಲ್ಲಿ ಸಹಾಯಧನ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಫಲಾನುಭವಿ ಹತ್ತಾರು ಬಾರಿ ಅಲೆದಾಡಿದರೂ ಸ್ಪಂದನೆ ಸಿಕ್ಕಿಲ್ಲ. ಮುಖ್ಯಾಧಿಕಾರಿ, ಆರೋಗ್ಯಾಧಿಕಾರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಶೋಷಿತ ಸಮುದಾಯದ ಹಕ್ಕು ನಿರಾಕರಿಸಿದರೆ ಸುಮ್ಮನಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಸಮಾಧಾನಿಸಿದ ಕೋಟ, ಅಧಿಕಾರಿ ರವಿಕೃಷ್ಣ ಬಳಿ ಮಾಹಿತಿ ಪಡೆದರು. ನಿರ್ಣಯ ಕೈಗೊಂಡಿದ್ದರೆ, ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.