ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ
Team Udayavani, Apr 14, 2017, 12:17 PM IST
ಮಂಗಳೂರು/ಉಡುಪಿ: ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ವೇಳೆ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರ ಪ್ರತಿಪಾದಿಸಿದುದರ ಸಂಕೇತವಾಗಿ ಕ್ರೈಸ್ತ ಚರ್ಚ್‌ಗಳಲ್ಲಿ ಗುರುವಾರ ಸಂಜೆ ಧರ್ಮಗುರು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು.
ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ, ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಬಿಷಪ್ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಪ್ರಕ್ರಿಯೆ ನಡೆಸಿದರು.
ಫಾ| ಜೆ.ಬಿ. ಕ್ರಾಸ್ತಾ ಮತ್ತು ಇತರ ಧರ್ಮಗುರು ಉಪಸ್ಥಿತರಿದ್ದರು. ಮಂಗಳೂರಿನಲ್ಲಿ 6 ಪುರುಷರು, 6 ಮಹಿಳೆಯರು, ಕಲ್ಯಾಣಪುರದಲ್ಲಿ 7 ಪುರುಷರು, 5 ಮಹಿಳೆಯರ ಪಾದ ತೊಳೆಯಲಾಯಿತು. ಮಹಿಳೆಯರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಪೋಪ್ ಫ್ರಾನ್ಸಿಸ್ ಅವರ ಆದೇಶದಂತೆ ಕಳೆದ ವರ್ಷದಿಂದ ಈ ಬದಲಾವಣೆ ಮಾಡಲಾಗಿತ್ತು.
ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಧರ್ಮ ಭಗಿನಿಯರೂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.