ಕ್ರೀಡೆಯಿಂದ ಮಾನಸಿಕ ನೆಮ್ಮದಿ: ಟಿ.ಆರ್. ಸುರೇಶ್
Team Udayavani, Jan 1, 2018, 11:07 AM IST
ಮಹಾನಗರ: ಪೊಲೀಸ್ ಮತ್ತು ಪತ್ರಕರ್ತರ ವೃತ್ತಿ ನಿತ್ಯ ಒತ್ತಡದಿಂದ ಕೂಡಿರುತ್ತದೆ. ಈ ನಿಟ್ಟಿನಲ್ಲಿ ದಿನಕ್ಕೆ ಒಂದು
ಗಂಟೆ ಕ್ರೀಡೆಗೆ ಮೀಸಲಿಟ್ಟರೆ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯವಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹೇಳಿದರು.
ನಗರದ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಮೈದಾನದಲ್ಲಿ ರವಿವಾರ ನಡೆದ ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪತ್ರಕರ್ತರು ಮತ್ತು ಪೊಲೀಸರು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಸಮಾಜದಲ್ಲಿ ಶಾಂತಿಯ ವಾತಾವರಣ ನಿರ್ಮಾಣ ಮಾಡಲು ಸಾಧ್ಯ ಎಂದರು.
ಸದೃಢರಾಗಲು ಸಹಕಾರಿ
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಜವಾಬ್ದಾರಿ ಬಹಳ ಇದೆ. ಕ್ರೀಡಾಕೂಟಗಳು ಇಂಥ ಒತ್ತಡಗಳಿಂದ ಮುಕ್ತಿ ನೀಡಲು, ದೈಹಿಕವಾಗಿ ಸದೃಢರಾಗಲು ಸಹಕಾರಿ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿದ್ದರು.
ಪಾಲಿಕೆ ಆಯುಕ್ತ ಮೊಹಮ್ಮದ್ ನಜೀರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ, ಎ.ಜೆ. ಆಸ್ಪತ್ರೆ ವೈದ್ಯ ಡಾ| ವೈ. ಭರತ್ ಶೆಟ್ಟಿ, ಪತ್ರಕರ್ತ ಡಾ| ಯು.ಪಿ. ಶಿವಾನಂದ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ, ಮಂಗಳೂರು ಪ್ರಸ್‌ಕ್ಲಬ್ ಅಧ್ಯಕ್ಷ ಡಾ| ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ
ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತ ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.