ಮೆಸ್ಕಾಂಗೆ ಮಾನ್ಸೂನ್‌ ಶಾಕ್‌!

Team Udayavani, Aug 7, 2018, 9:43 AM IST

mescom.jpg

ದಕ್ಷಿಣ ಕನ್ನಡ 6.28 ಕೋ. ರೂ.
ಉಡುಪಿ 3.36 ಕೋ.ರೂ.
ಶಿವಮೊಗ್ಗ 2.56 ಕೋ. ರೂ.
ಚಿಕ್ಕಮಗಳೂರು 2.86 ಕೋ. ರೂ.

ಮಂಗಳೂರು: ವಿದ್ಯುತ್‌ ಪೂರೈಕೆ ಕಂಪೆನಿ ಮೆಸ್ಕಾಂಗೆ ಈ ಸಾಲಿನ ಮುಂಗಾರು ಭಾರೀ ಶಾಕ್‌ ನೀಡಿದೆ.  ನಾಲ್ಕು ತಿಂಗಳಲ್ಲಿ ಗಾಳಿ-ಮಳೆಯ ಅಬ್ಬರ ದಿಂದ ಒಟ್ಟು 15 ಕೋಟಿ ರೂ.ಗೂ ಅಧಿಕ ನಷ್ಟವುಂಟಾಗಿದೆ. ಇದರಿಂದ ಇಲಾಖೆಯ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ಹಿನ್ನಡೆ ಒದಗುವ ಸಾಧ್ಯತೆ ಇದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿವೆ. ಈ ಮಳೆಗಾಲದಲ್ಲಿ ದ. ಕನ್ನಡದಲ್ಲಿ 6.28 ಕೋ. ರೂ., ಉಡುಪಿಯಲ್ಲಿ 3.36 ಕೋ. ರೂ., ಶಿವಮೊಗ್ಗದಲ್ಲಿ 2.56 ಕೋ. ರೂ. ಹಾಗೂ ಚಿಕ್ಕಮಗಳೂರಿನಲ್ಲಿ 2.86 ಕೋ. ರೂ. ಮೊತ್ತದ ಮೆಸ್ಕಾಂ ಆಸ್ತಿಗಳಗೆ ಹಾನಿಯಾಗಿದೆ. ಎ. 1ರಿಂದ ಮೇ 29ರ ವರೆಗಿನ 2 ತಿಂಗಳ ಅವಧಿಯಲ್ಲಿ 5 ಕೋ. ರೂ. ನಷ್ಟವಾಗಿದ್ದರೆ, ಅನಂತರದ 2 ತಿಂಗಳಲ್ಲಿ ಅದಕ್ಕಿಂತ ಎರಡು ಪಟ್ಟು ನಷ್ಟವಾಗಿದೆ.

ವಿದ್ಯುತ್‌ ವ್ಯವಸ್ಥೆ ದುರಸ್ತಿಯನ್ನು ಮೆಸ್ಕಾಂ ತನ್ನ ಆರ್ಥಿಕ ನಿಧಿ ಹೊಂದಿಸಿ ಮಾಡಿದೆ. ಆದರೆ ಈ ಆರ್ಥಿಕ ಹೊರೆ ಮುಂದೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಪ್ರಾಕೃತಿಕ ವಿಕೋಪ ನಿಧಿಯಿಂದ ನೆರವು ಲಭ್ಯವಾದರೆ ಮಾತ್ರ ಮೆಸ್ಕಾಂ ನಿಟ್ಟುಸಿರು ಬಿಡಬಹುದು.

11 ಸಾವಿರ ಕಂಬಗಳು ಧರಾಶಾಯಿ
ನಾಲ್ಕು ಜಿಲ್ಲೆಗಳಲ್ಲಿ  ನಾಲ್ಕು ತಿಂಗಳಲ್ಲಿ  ಒಟ್ಟು 11,641 ವಿದ್ಯುತ್‌ ಕಂಬಗಳು ಹಾನಿಗೊಂಡಿದ್ದು, 11,313 ಕಂಬಗಳನ್ನು ಬದಲಾಯಿಸಲಾಗಿದೆ. ದ. ಕನ್ನಡದಲ್ಲಿ ಅತಿಹೆಚ್ಚು 4,329 ಕಂಬಗಳಿಗೆ ಹಾನಿಯಾಗಿದ್ದು ಎಲ್ಲವನ್ನೂ ಬದಲಾಯಿಸಲಾಗಿದೆ. ಉಡುಪಿಯಲ್ಲಿ 2,898 ಕಂಬಗಳಿಗೆ ಹಾನಿಯಾಗಿದ್ದು, 2,895ನ್ನು ಬದಲಾಯಿಸಲಾಗಿದೆ. ಶಿವಮೊಗ್ಗದಲ್ಲಿ ಹಾನಿಗೊಳಗಾದ ಎಲ್ಲ 2,140 ಕಂಬಗಳ ಬದಲು ಹೊಸತು ಅಳವಡಿಸಲಾಗಿದೆ. ಚಿಕ್ಕಮಗಳೂರಿನಲ್ಲಿ 2,274 ಕಂಬಗಳಿಗೆ ಹಾನಿಯಾಗಿದ್ದು, ಇದರಲ್ಲಿ 1,949 ಕಂಬಗಳನ್ನು ಬದಲಾಯಿಸಲಾಗಿದೆ. 325 ಕಂಬಗಳನ್ನು ಬದಲಾಯಿಸಲು ಬಾಕಿಯಿದೆ.

ಒಟ್ಟು 990 ವಿದ್ಯುತ್‌ ಪರಿವರ್ತಕಗಳು ಹಾನಿಗೊಂಡಿದ್ದು, 858ನ್ನು ಬದಲಾಯಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು 477 ಹಾನಿಗೊಂಡಿದ್ದು, ಎಲ್ಲವನ್ನೂ ದುರಸ್ತಿ ಹಾಗೂ ಬದಲಾಯಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಹಾನಿಗೊಳಗಾದ 286ರಲ್ಲಿ 286 ಪರಿವರ್ತಕಗಳನ್ನು ಸರಿಪಡಿಸಲಾಗಿದ್ದು, 100 ಬಾಕಿ ಇವೆ. ಶಿವಮೊಗ್ಗದಲ್ಲಿ 66 ಪರಿವರ್ತಕಗಳಿಗೆ ಹಾನಿಯಾಗಿದ್ದು, 61ನ್ನು, ಚಿಕ್ಕಮಗಳೂರಿನಲ್ಲಿ 61ರಲ್ಲಿ 34ನ್ನು ದುರಸ್ತಿ ಮಾಡಲಾಗಿದೆ.
ಗಾಳಿ, ಮಳೆಯಿಂದ 710.91 ಕಿ.ಮೀ. ವಿದ್ಯುತ್‌ ಮಾರ್ಗ ಹಾನಿಗೊಂಡಿದ್ದು, ಇದರಲ್ಲಿ 691 ಕಿ.ಮೀ.ಯಲ್ಲಿ ತಂತಿಗಳನ್ನು ದುರಸ್ತಿಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 290.25 ಕಿ.ಮೀ. ಮಾರ್ಗ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 32.3 ಕಿ.ಮೀ. ಹಾನಿಗೊಳಗಾಗಿದ್ದು ಸರಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾನಿಗಿಡಾದ 168.11 ಕಿ.ಮೀ. ಮಾರ್ಗದಲ್ಲಿ 148.82 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 186.08 ಕಿ.ಮೀ. ಮಾರ್ಗದಲ್ಲಿ 185,85 ಕಿ.ಮೀ. ಸರಿಪಡಿಸಲಾಗಿದೆ. 

*ಕೇಶವ ಕುಂದರ್‌

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.