ಮತ್ತೊಮ್ಮೆ ಸ್ಪರ್ಧೆಗೆ ಸಿದ್ಧವಾಗುತ್ತಿದೆ ಮಹಾನಗರ ಪಾಲಿಕೆ
Team Udayavani, Nov 30, 2018, 10:35 AM IST
ಮಹಾನಗರ: ಈ ಬಾರಿಯ ಸ್ವಚ್ಛ ಸರ್ವೇಕ್ಷಣಾ ಪಟ್ಟಿಯಲ್ಲಿ ದೇಶದಲ್ಲಿಯೇ ಘನತಾಜ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ನಗರ ಎಂಬ ಮನ್ನಣೆ ಪಡೆದುಕೊಂಡು ಮೊದಲ ಸ್ಥಾನ ಗಳಿಸಿದ್ದ ಮಂಗಳೂರು ನಗರವು ಮುಂದಿನ ವರ್ಷದ ಸ್ಪರ್ಧೆಗೆ ಮತ್ತೆ ಅಣಿಯಾಗುತ್ತಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದೇಶದ ಎಲ್ಲ ನಗರ, ಪಟ್ಟಣಗಳಲ್ಲಿ’ಸ್ವಚ್ಛ ಸರ್ವೇಕ್ಷಣ-2019′ ಅನ್ನು ಕೈಗೊಳ್ಳಲು ನಿರ್ಧರಿಸಿದ್ದು, ಅದರಂತೆ ಮಂಗಳೂರು ಮಹಾನಗರ ಪಾಲಿಕೆಯು ಈ ಸಮೀಕ್ಷೆಗೆ ಒಳಪಡಲಿದೆ. ಅದಕ್ಕಾಗಿ ಪಾಲಿಕೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಮುಂದಿನ ಬಾರಿಯೂ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ದೇಶದ ಸ್ವಚ್ಛ ನಗರದ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಪಡೆಯಬೇಕು ಎಂಬ ಆಶಯದೊಂದಿಗೆ ಪಾಲಿಕೆ ಹೆಜ್ಜೆ ಇಡುತ್ತಿದೆ.
ಸ್ವಚ್ಛ ಸರ್ವೇಕ್ಷಣ-2016ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2017ರಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2018ರಿಂದ ಭಾರತ ದೇಶದ ಎಲ್ಲ ನಗರಗಳನ್ನು ಆಯ್ಕೆ ಮಾಡಿಕೊಂಡಿದೆ. ನಗರಗಳ ಸಂಖ್ಯೆ ಹೆಚ್ಚಾಗುವುದರಿಂದ ಪೈಪೋಟಿ ಹೆಚ್ಚಿರಲಿದ್ದು, ಆ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾವಹಿಸಿ ಕಾರ್ಯಚರಿಸುತ್ತಿದ್ದಾರೆ.
ಅಂಕಗಳಲ್ಲಿ ಬದಲಾವಣೆ
ಸ್ವಚ್ಛ ಸರ್ವೇಕ್ಷಣ-2019ರ ಅಂಗವಾಗಿ ಕೇಂದ್ರ ತಂಡ ಎಲ್ಲ ನಗರಗಳಲ್ಲಿ ಶೀಘ್ರದಲ್ಲೇ ಸಮೀಕ್ಷೆಯನ್ನು ನಡೆಸಲಿದೆ. ಇದಕ್ಕೆ ಸಂಬಂಧಿಸಿ 4 ಹಂತಗಳಲ್ಲಿ ಅಂಕಗಳನ್ನು ನಿಗದಿಪಡಿಸಲಾಗಿದೆ. ಒಟ್ಟು ಅಂಕಗಳು 5,000 ಇದ್ದು, ಇದರಲ್ಲಿ ಕೇಂದ್ರ ತಂಡದಿಂದ ನೇರ ಸಮೀಕ್ಷೆಯ 1250 ಅಂಕ, ಸಾರ್ವಜನಿಕ ಅಭಿಪ್ರಾಯ 1250 ಅಂಕ, ಸೇವಾ ಆಧಾರಿತ ಪ್ರಗತಿ 1,250 ಅಂಕ, ಹಾಗೂ ಸಟೀμಕೇಶನ್‌ಗೆ 12,500 ಅಂಕಗಳನ್ನು ನೀಡಲಾಗುತ್ತದೆ. 2018ರಲ್ಲಿ ಮೂರು ಹಂತಗಳಲ್ಲಿ ಒಟ್ಟು 4,000 ಅಂಕಗಳನ್ನು ನಿಗದಿಪಡಿಸಲಾಗಿತ್ತು.
ಹಸಿ ಕಸ-ಒಣ ಕಸ ಪ್ರತ್ಯೇಕಿಸಿ
ಮನಪಾ ಹಸಿ, ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಸಾರ್ವಜನಿಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರು ಅಷ್ಟು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ನಗರ ನೈರ್ಮಲ್ಯ ಮತ್ತು ತ್ಯಾಜ್ಯ ಸಂಗ್ರಹಣಾ ಕಾರ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪಾಲಿಕೆಯಿಂದ ನಿಯೋಜಿಸಿದ ವಾಹನಗಳಿಗೆ ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸಿ ಪ್ರತ್ಯೇಕವಾಗಿ ನೀಡಿ ಸಹಕರಿಸಿದರೆ ಸ್ವತ್ಛ ಮಂಗಳೂರು ಕಲ್ಪನೆ ಸಾಕಾರಗೊಳ್ಳಲಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ನೈರ್ಮಲೀಕರಣಕ್ಕೆ ಸಂಬಂಧಿಸಿ ಸಾರ್ವಜನಿಕರ ದೂರುಗಳ ನಿರ್ವಹಣೆಗೆ ಮಹಾನಗರ ಪಾಲಿಕೆಯು ಸ್ವಚ್ಛತ ಆ್ಯಪ್ 2016ರಲ್ಲಿ ಬಿಡುಗಡೆಗೊಳಿಸಿತ್ತು. ಆದರೆ, ಈ ಅಪ್ಲಿಕೇಶನ್ ಡೌನ್ ಲೋಡ್ ಮತ್ತು ಉಪಯೋಗದಲ್ಲಿ ಬಹಳ ಹಿಂದೆ ಇದ್ದುದರಿಂದ ಮನಪಾವು ಅಂಕವನ್ನು ಕಳೆದುಕೊಂಡಿತ್ತು. ಆದ್ದರಿಂದ ಈ ಸ್ವಚ್ಛತ ಅಪ್ಲಿಕೇಶನ್ ಆ್ಯಂಡ್ರಾಯ್ಡ ಮತ್ತು ಐಒಎಸ್ ಆಧಾರಿತ ಮೊಬೈಲ್‌ಗಳಲ್ಲಿ ಡೌನ್ ಲೋಡ್ ಮಾಡಬಹುದಾಗಿದೆ. ಆದ್ದರಿಂದ ಸ್ವಚ್ಛತ ಆ್ಯಪ್ ಡೌನ್‌ಲೋಡ್ ಹಾಗೂ ಉಪಯೋಗದಿಂದ ಹೆಚ್ಚು ಅಂಕ ಗಳಿಸಲು ಸಹಕಾರಿಯಾಗಬಹುದು.
ಸಾರ್ವಜನಿಕರ ಭಾಗವಹಿಸುವಿಕೆ ಅಗತ್ಯ
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯ. ಹೀಗಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಸಾರ್ವಜನಿಕರಿಗೆ ಕೇಳಲಾಗುವ ಅಥವಾ ಆನ್‌ಲೈನ್-ಆ್ಯಪ್ ಮುಖಾಂತರ ನಡೆಸಲಾಗುವ ಸಮೀಕ್ಷೆಯಲ್ಲಿ ಭಾಗವಹಿಸಬೇಕಾಗಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಯ ಬಗ್ಗೆಯೂ ತಂಡ ಅಂಕಗಳನ್ನು ನಿಗದಿಪಡಿಸುತ್ತದೆ.
ಸಕಲ ಸಿದ್ಧತೆ
ಈ ಬಾರಿಯೂ ಸ್ವಚ್ಛತಾ ಸರ್ವೇಕ್ಷಣಾ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಅಧಿಕಾರಿಗಳಿಗೆ ಪಿಪಿಟಿ ಪ್ರಸ್ತುತಿಯ ಮೂಲಕ ಮಾಹಿತಿ ನೀಡಲಾಗಿದೆ. ಪಾಲಿಕೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು.
– ಕೆ. ಭಾಸ್ಕರ್, ಮೇಯರ್
ಪ್ರಜ್ಞಾ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.