ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಸಚಿವ ಡಾ| ಅಶ್ವತ್ಥನಾರಾಯಣ
Team Udayavani, Dec 18, 2022, 1:00 AM IST
ಮೂಡುಬಿದಿರೆ : ಗುಣ ಮಟ್ಟದ ಶಿಕ್ಷಣ ನೀಡಲು ಸರಕಾರ ಬದ್ಧವಾಗಿದ್ದು ವಿದ್ಯಾರ್ಥಿ ಕೇಂದ್ರಿತ ವಾಗಿ ಹಲವು ಸುಧಾರಣೆಗಳಾಗಿವೆ. ಯುವಕ ಯುವತಿಯರಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡಲು ಸ್ಕಿಲ್ ಕನೆಕ್ಟ್ ಫ್ಲಾಟ್ ಎಂಬ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ.
ಮೂಡುಬಿದಿರೆ ಹೊರವಲಯದ ಬನ್ನಡ್ಕದಲ್ಲಿ ಸ್ಥಾಪನೆಯಾಗಿರುವ ಮಂಗಳೂರು ವಿ.ವಿ.ಯ 6ನೇ ಘಟಕ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಇ-ಗವರ್ನೆನ್ಸ್, ಯೂನಿಫೈಡ್ ಯೂನಿ ವರ್ಸಿಟಿ ಕಾಲೇಜ್ ಮ್ಯಾನೇಜೆ¾ಂಟ್, ಇ-ಆಫೀಸ್, ಸೇವಾ ಸಿಂಧು ಮುಂತಾದ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆಯನ್ನು ತೋರಲಾಗುತ್ತಿದೆ ಎಂದರು.
ವೆಬ್‌ಸೈಟ್‌ಅನಾವರಣ
ಶಾಸಕ ಉಮಾನಾಥ್ ಕೋಟ್ಯಾನ್ ಘಟಕ ಕಾಲೇಜಿನ ವೆಬ್‌ಸೈಟ್ ಅನಾ ವರಣಗೊಳಿಸಿ ಮಾತನಾಡಿ, ಕಳೆದ ಸಾಲಿನಲ್ಲಿ ಪ್ರಾರಂಭವಾದ ಕಾಲೇಜು ತರಗತಿಗಳಲ್ಲಿ ಈ ವರ್ಷ 100ರಷ್ಟು ದಾಖಲಾತಿ ಆಗಿದೆ. ಸುಸಜ್ಜಿತ ಕಾಲೇಜು ಕ್ಯಾಂಪಸ್ ಕಟ್ಟಲು ಐದು ಎಕ್ರೆ ಜಾಗವನ್ನು ವಿ.ವಿ.ಗೆ ಹಸ್ತಾಂತರಿಸ ಲಾಗುವುದು ಎಂದರು.
ವಿ.ವಿ. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣ ಪ್ರದೇಶಕ್ಕೆ ಕಾಲೇಜು ಒದಗಿಸಿಕೊಡಲು ಶಾಸಕರು ಅವಿರತ ಶ್ರಮವಹಿಸಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬುದರ ಜತೆಗೆ ಸಬ್ ಕಾ ಪ್ರಯಾಸ್ ಕೂಡ ಅಗತ್ಯ ಎಂದರು.
ಪಡುಮಾರ್ನಾಡು ಗ್ರಾ.ಪಂ. ಅಧ್ಯಕ್ಷೆ ಸಿ.ಎಸ್. ಕಲ್ಯಾಣಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಪೈ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ವಿ.ವಿ. ಹಣಕಾಸು ಅಧಿಕಾರಿ ಡಾ| ವೈ. ಸಂಗಪ್ಪ , ವಿವಿಧ ವಿಭಾಗಗಳ ಡೀನ್‌ಗಳು, ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.
ಕುಲಸಚಿವ ಪ್ರೊ| ಕಿಶೋರ್ ಕುಮಾರ್ ಸಿ.ಕೆ. ಸ್ವಾಗತಿಸಿದರು. ಆಶಾ ಶ್ಯಾಲೆಟ್ ಡಿ’ಸೋಜಾ ಮತ್ತು ಸುಲೋಚನಾ ಪಚ್ಚನಡ್ಕ ನಿರೂಪಿಸಿ ದರು. ಘಟಕ ಕಾಲೇಜಿನ ಸಂಯೋಜಕ ಡಾ| ಗಣಪತಿ ಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.