ಉತ್ತಮ ಚಿಕಿತ್ಸೆ ನೀಡದಿದ್ದರೆ ಕಠಿನ ಕ್ರಮದ ಎಚ್ಚರಿಕೆ:ವೆನ್ಲಾಕ್‌ಗೆ ಸಚಿವ ಕೋಟ ದಿಢೀರ್‌ ಭೇಟಿ

Team Udayavani, Jan 27, 2021, 2:08 AM IST

ಉತ್ತಮ ಚಿಕಿತ್ಸೆ ನೀಡದಿದ್ದರೆ ಕಠಿನ ಕ್ರಮದ ಎಚ್ಚರಿಕೆ:ವೆನ್ಲಾಕ್‌ಗೆ ಸಚಿವ ಕೋಟ ದಿಢೀರ್‌ ಭೇಟಿ

ಮಂಗಳೂರು: ಜಿಲ್ಲಾ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದಲ್ಲದೆ ಅವರೊಂದಿಗೆ ಸೌಹಾರ್ದದಿಂದ ನಡೆದುಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವೆನಾÉಕ್‌ ಆಸ್ಪತ್ರೆಯ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಲ್ಲಿನ ರೋಗಿಗಳ ಸಮಸ್ಯೆಯನ್ನು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರೋಗಿಗಳಿಗೆ ಇಲ್ಲಿನ ವೈದ್ಯರು ಹಾಗೂ ಸಿಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮುಂದಿನ ದಿನದಲ್ಲಿ ಈ ರೀತಿಯ ದೂರುಗಳು ಬರದಂತೆ ಕಾರ್ಯ ನಿರ್ವಹಿಸಬೇಕು. ಅಗತ್ಯವಿರುವ ಔಷಧ ಸಾಮಗ್ರಿ ಸೇರಿದಂತೆ ಚಿಕಿತ್ಸಾ ಪರಿಕರಗಳನ್ನು ಆಗಿಂದಾಗೆ ಟೆಂಡರ್‌ ಕರೆದು ದಾಸ್ತಾನುಗಳು ಇರುವಂತೆ ಎಚ್ಚರ ವಹಿಸಬೇಕು ಎಂದರು.

ಕಠಿನ ಕ್ರಮದ ಎಚ್ಚರಿಕೆ :

ಇಲ್ಲಿನ ಕೆಲವು ವೈದ್ಯರುಗಳು ಚಿಕಿತ್ಸೆಗೆ  ಬರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗೆ ಹೋಗಲು ತಿಳಿಸುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಕಂಡು ಬಂದಲ್ಲಿ ಅಂತಹ ವೈದ್ಯರುಗಳ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳನ್ನು ಪರೀಕ್ಷಿಸಿ ಔಷಧ ಮತ್ತು ಮಾತ್ರೆಗಳನ್ನು ಖಾಸಗಿ ಮೆಡಿಕಲ್‌ ಸೆಂಟರ್‌ನಲ್ಲಿ ಕೊಂಡುಕೊಳ್ಳಲು ಚೀಟಿ ಬರೆಯುತ್ತಾರೆ ಎಂಬ ಬಗ್ಗೆ ಕೇಳಿಬರುತ್ತಿದೆ. ಇದಕ್ಕೆ ಆಸ್ಪದ ನೀಡದೆ ಇಲ್ಲಿಯೇ ಉಚಿತವಾಗಿ ಔಷಧ ಮತ್ತು ಮಾತ್ರೆಗಳನ್ನು ವಿತರಿಸಬೇಕು ಎಂದರು.

ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧಿಕ್ಷಕರಾದ ಸದಾಶಿವ ಶಾನುಭೋಗ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ರಾಮಚಂದ್ರ ಬಾಯರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.