Minister Madhu Bangarappa; ಅವಕಾಶ ಸಿಕ್ಕಿದರೆ ಅಯೋಧ್ಯೆಗೆ ಹೋಗುವೆ

Team Udayavani, Jan 14, 2024, 12:14 AM IST

Minister Madhu Bangarappa; ಅವಕಾಶ ಸಿಕ್ಕಿದರೆ ಅಯೋಧ್ಯೆಗೆ ಹೋಗುವೆ

ಮಂಗಳೂರು: ಬಿಜೆಪಿಯವರು ದೇವರು ಮತ್ತು ಸಾವಿನಲ್ಲಿ ರಾಜಕೀಯ ಮಾಡುತ್ತಾರೆ. ಈಗ ರಾಮನ ಹೆಸರಲ್ಲಿ ರಾಜಕೀಯ ನಡೆಸುತ್ತಿದ್ದಾರೆ. ಆದರೆ ರಾಮನ ನಿಜವಾದ ಭಕ್ತರು ನಾವು, ಮಂದಿರ ಉದ್ಘಾಟನೆಗೆ ಕರೆಯದಿದ್ದರೂ ಇಲ್ಲಿಂದಲೇ ರಾಮನನ್ನು ನಂಬುತ್ತೇವೆ. ನಾನು ಒರಿಜಿನಲ್‌ ಹಿಂದೂ. ಯಾರು ನಕಲಿ ಎಂದು ಅವರೇ ನೋಡಿಕೊಳ್ಳಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾಂಗ್ರೆಸಿಗರಿಗೆ ಎಲ್ಲ ಧರ್ಮದ ಬಗ್ಗೆ ಗೌರವ ಇದೆ. ಅವಕಾಶ ಸಿಕ್ಕಿದಾಗ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದರು.

ಅಯೋಧ್ಯೆ ವಿಚಾರದಲ್ಲಿ ಹೈಕಮಾಂಡ್‌ ನಮಗೆ ಮಾರ್ಗದರ್ಶನ ಕೊಡುವುದು ತಪ್ಪಾ?, ಗೃಹ ಸಚಿವ ಡಾ| ಪರಮೇಶ್ವರ್‌ ಮತ್ತು ನಾನು ಹೈಕಮಾಂಡ್‌ ಹೇಳಿರುವುದನ್ನೇ ಪಾಲಿಸುತ್ತೇವೆ. ಹೈಕಮಾಂಡ್‌ನಿಂದ ನಾನು ಇವತ್ತು ಶಿಕ್ಷಣ ಸಚಿವನಾಗಿದ್ದೇನೆ. ದೇವರಂಥ ಮಕ್ಕಳಿಗೆ ನಾವು ಶಿಕ್ಷಣ ಕೊಡುತ್ತಿದ್ದೇವೆ. ದೇವರಿಗೆ ಪೂಜೆ ಮಾಡುತ್ತೇವೋ ಬಿಡುತ್ತೇವೋ ಗೊತ್ತಿಲ್ಲ, ಆದರೆ ಶಿಕ್ಷಣ ಕೊಡುವುದು ಪುಣ್ಯದ ಕೆಲಸ ಎಂದರು.

ಬಿಎಸ್‌ವೈಗೆ ತಿರುಗೇಟು
ರಾಮ ಮಂದಿರ ಲೋಕಾರ್ಪಣೆಗೆ ಹೋಗದಿರುವ ಕಾಂಗ್ರೆಸ್‌ ನಿರ್ಧಾರದಿಂದ ಮುಂದೆ ಅದು ಪಶ್ಚಾತ್ತಾಪ ಪಡಲಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಪಶ್ಚಾತ್ತಾಪ ಎಂದು ಹೇಳಲು ಯಡಿಯೂರಪ್ಪ ಯಾರು? ಅವರು ಹೇಳುವುದು ಜನರ ತೀರ್ಮಾನವಾ? ನಮ್ಮ ಭವಿಷ್ಯ ತೀರ್ಮಾನಿಸುವುದು ರಾಜ್ಯದ ಜನರು. ಯಡಿಯೂರಪ್ಪ ಅಥವಾ ನಳಿನ್‌ ಕುಮಾರ್‌ ಕಟೀಲು ಅಲ್ಲ, ಮತದಾರರು ಹೇಳುತ್ತಾರೆ ಎಂದರು.

ಅಭ್ಯರ್ಥಿ ಆಯ್ಕೆ ಜವಾಬ್ದಾರಿ
ಲೋಕಸಭಾ ಅಭ್ಯರ್ಥಿ ಆಯ್ಕೆ ಕೆಲಸ ನನಗೆ ಕೊಟ್ಟಿದ್ದಾರೆ. ರಣದೀಪ್‌ ಸಿಂಗ್‌ ಸುಜೇìವಾಲಾ ಹಾಗೂ ಬೇರೆ ಮುಖಂಡರು ಕರಾವಳಿ ಭಾಗದಲ್ಲಿ ಓಡಾಡಿ ಎಂದಿದ್ದಾರೆ. ದಕ್ಷಿಣ ಕನ್ನಡ ಅಭ್ಯರ್ಥಿ ಬಗ್ಗೆ ಕೆಲವು ವಿಚಾರ ಕಳುಹಿಸಿದ್ದೇನೆ, ಅಭ್ಯರ್ಥಿಗಳ ಕುರಿತು ಈ ಭಾಗದ ಮುಖಂಡರ ಜತೆ ಮತ್ತೆ ಚರ್ಚಿಸಿ ಮಾಹಿತಿ ಕಲೆ ಹಾಕುತ್ತೇನೆ. ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಬಲ ಇಲ್ಲದಿದ್ದರೂ ನಾವು ಮತ್ತೆ ವಿಶ್ವಾಸ ಪಡೆಯಲು ಮತ್ತೆ ಕರಾವಳಿಗೆ ಬರುತ್ತಿದ್ದೇವೆ ಎಂದರು.

ನಳಿನ್‌ ರಾಜೀನಾಮೆ ನೀಡಲಿ
ನಾವು ಗ್ಯಾರಂಟಿ ಕೊಡ್ತೀವಿ ಎಂದಾಗ ರಾಜ್ಯದ ಜನರು ಅಧಿಕಾರ ಕೊಟ್ಟರು. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಚರಂಡಿ, ಕಾಲುವೆ ನೋಡಬೇಡಿ, ಹೊಡಿಬಡಿ ಎಂದರು. ಅವತ್ತು ನನ್ನ ರಾಜೀನಾಮೆ ಕೇಳಿದ್ದರು, ಮಾನ ಮರ್ಯಾದೆ ಇದ್ದರೆ ಅವರು ರಾಜೀನಾಮೆ ಕೊಡಲಿ ಎಂದು ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ನಳಿನ್‌ ಕುಮಾರ್‌ ಕಟೀಲು ಕಾರಣ, ಬಂಗಾರಪ್ಪ ಕೊಟ್ಟ ಭಿಕ್ಷೆಯಲ್ಲಿ ನಳಿನ್‌ ಕುಮಾರ್‌ ಕಟೀಲು ಅಧಿಕಾರ ಪಡೆದಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದಂತೆ ಸಾವಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದರು.

ನಳಿನ್‌ ಸೋಲಿಸಲು ಶ್ರಮಿಸುವೆ
ನಳಿನ್‌ ಅವರು ಇಲ್ಲಿ ಹಿಂದುತ್ವ ಮತ್ತು ಭಾವನಾತ್ಮಕವಾಗಿ ಗೆದ್ದಿದ್ದಾರೆ. ಅವರು ಮಾಡಿದ ಅಭಿವೃದ್ಧಿ ತೋರಿಸಿ, ಮೋದಿ ಹೆಸರು ಬಿಟ್ಟು ಬೇರೆ ಏನು ಮಾಡಿದ್ದಾರೆ? ಅವರು ಪ್ರಗತಿ ತೋರಿಸಿ ಅಧಿಕಾರಕ್ಕೆ ಬಂದಿಲ್ಲ. ನಳಿನ್‌ಗೆ ಮತ್ತೆ ಟಿಕೆಟ್‌ ನೀಡೇಕು. ಆಗ ಇಲ್ಲಿಗೆ ನಾನೇ ಬರುತ್ತೇನೆ. ಅವರು ಇಲ್ಲಿ ಸೋಲಬೇಕು. ಅವರಿಗೆ ಚುನಾವಣೆಯಲ್ಲಿ ಏನು ಮಾಡಬೇಕೋ ನಾನು ಇಲ್ಲಿ ಮಾಡುತ್ತೇನೆ. ನಾನು ಕೂಡ ಅದರ ಸೂತ್ರಧಾರ ಆಗುತ್ತೇನೆ ಎಂದರು.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.