ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಸಚಿವ ರಮಾನಾಥ ರೈ
Team Udayavani, Apr 19, 2018, 11:21 AM IST
ಬಂಟ್ವಾಳ: ಸಚಿವ ಬಿ. ರಮಾನಾಥ ರೈ ಅವರು ಎ. 19ರಂದು ನಾಮಪತ್ರ ಸಲ್ಲಿಸುವುದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಳಿವೇ ಇಲ್ಲ, ಜಿಲ್ಲೆಯಲ್ಲಿ ಎಲ್ಲ ಸ್ಥಾನಗಳನ್ನೂ ಕಾಂಗ್ರೆಸ್ ಪಡೆಯುವುದರೊಂದಿಗೆ ರಾಜ್ಯ
ದಲ್ಲೂ ಅತೀ ಹೆಚ್ಚಿನ ಸ್ಥಾನ ಗಳಿಸುತ್ತದೆ ಹಾಗೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಪೂಜಾರಿ ತಿಳಿಸಿದರು.
‘ರೈಯವರೇ ನಿಮ್ಮಂಥ ಜನಸೇವಕರನ್ನು ಪಡೆದಿರುವುದು ಕಾಂಗ್ರೆಸ್ ಮತ್ತು ಈ ರಾಜ್ಯದ ಜನತೆಯ ಪುಣ್ಯ ನೀವು ಅತೀ ಹೆಚ್ಚು ಅಂತರದ ಮತಗಳಿಂದ ವಿಜಯಿಯಾಗುತ್ತೀರಿ. ನಿಮಗೆ ದೇವರ ದಯೆಯೂ ಇದೆ. ಅಧಿಕಾರ ಇರಲಿ, ಇಲ್ಲದೇ ಇರಲಿ ನಮ್ಮಲ್ಲಿ ಜನಸೇವ ಮನೋಭಾವ ಅತಿ ಮುಖ್ಯವಾಗಿರಬೇಕು’ ಎಂದು ಹಿತನುಡಿದರು. ರೈ ಅವರನ್ನು ಅವರ ವಾಹನದ ತನಕ ಬೀಳ್ಕೊಟ್ಟು ಪೂಜಾರಿ ಅವರು ಶುಭ ಹಾರೈಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಟಾಸ್ ಅಲಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು
ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್ ಇಂದಿನಿಂದ
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.