ಸಚಿವ ರೋಷನ್ ಬೇಗ್ ವಿರುದ್ಧ ಪ್ರತಿಭಟನೆ
Team Udayavani, Oct 15, 2017, 3:12 PM IST
ಪುತ್ತೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ರಾಜ್ಯ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ನೀಡಿರುವ ಅವಹೇಳನಕಾರಿ ಹೇಳಿಕೆಯ ವಿರುದ್ಧ ಪುತ್ತೂರು ಬಿಜೆಪಿ ವತಿಯಿಂದ ಶನಿವಾರ ನಗರದ ಗಾಂಧಿ ಕಟ್ಟೆಯ ಬಳಿ ಪ್ರತಿಭಟನೆ ಸಭೆ ನಡೆಯಿತು.
ಅವನತಿಗೆ ಹಾದಿ
ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಾರ್ವಜನಿಕ ಸಭೆಯಲ್ಲಿ ರಾಜ್ಯ ಸಚಿವ ರೋಷನ್ ಬೇಗ್ ಅವರು ಪ್ರದಾನಿ ನರೇಂದ್ರ ಮೋದಿಯವರ ಕುರಿತು ಕೀಳು ಮಟ್ಟದ ಶಬ್ದವನ್ನು ಪ್ರಯೋಗಿಸಿ ಪಕ್ಷದ ಭಾಷೆ, ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಪ್ರಧಾನಿಯವರು ದೇಶದ 125 ಕೋಟಿ ಜನರ ಪ್ರತಿನಿಧಿ ಎಂಬುದನ್ನೂ ಅವರು ಮರೆತಿದ್ದಾರೆ. ಈ ಹಿಂದೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧವೂ ಇದೇ ರೀತಿ ಕೀಳು ಭಾಷೆ ಪ್ರಯೋಗಿಸಿದ್ದರು. ಇದು ಕಾಂಗ್ರೆಸ್ ಪಕ್ಷದ ಅವನತಿಯ ಸೂಚಕವಾಗಿದೆ. ಇಂಥವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಕೃತಿಗೆ ಬೆಂಕಿ
ಪ್ರತಿಭಟನ ಸಭೆಯ ಬಳಿ ರಾಜ್ಯ ಸಚಿವ ರೋಷನ್ ಬೇಗ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ನಗರ ಮಂಡಲದ ಕಾರ್ಯದರ್ಶಿಗಳಾದ ರಾಮದಾಸ್ ಹಾರಾಡಿ, ಗೌರಿ ಬನ್ನೂರು, ಡಿ. ಶಂಭು ಭಟ್, ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಕೋಡಿಂಬಾಡಿ, ಶಿವರಂಜನ್, ವಿಶ್ವನಾಥ ಗೌಡ, ಬೂಡಿಯಾರು ರಾಧಾಕೃಷ್ಣ ರೈ, ಉಷಾ ನಾರಾಯಣ, ಹರಿಣಿ ಪುತ್ತೂರಾಯ, ಮೀನಾಕ್ಷಿ ಮಂಜುನಾಥ, ನಿತೀಶ್ ಕುಮಾರ್ ಶಾಂತಿವನ, ಪುಯಿಲ ಕೇಶವ ಗೌಡ, ಲಕ್ಷ್ಮಣ ಗೌಡ ರಾಜೇಶ್ ಬನ್ನೂರು, ಹರೀಶ್ ಬಿಜತ್ರೆ, ಸುನೀಲ್ ದಡ್ಡು, ಪುರುಷೋತ್ತಮ ಮುಂಗ್ಲಿಮನೆ, ಭರತ್ ಈಶ್ವರಮಂಗಲ, ಯತಿರಾಜ್ ರೈ ನೀರ್ಮಾಡಿ, ಸುರೇಶ್ ಆಳ್ವ, ಸಂದೀಪ್ ಹೊಸಮನೆ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಅನೀಶ್ ಬಡೆಕ್ಕಿಲ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.