ಕೆಸರು ಗದ್ದೆಗಿಳಿದು ನಾಟಿ ಮಾಡಿದ ಸಚಿವ ಎಸ್.ಅಂಗಾರ
Team Udayavani, Jul 18, 2021, 10:05 PM IST
ಸವಣೂರು : ಇಲ್ಲಿನ ಚಂದ್ರನಾಥ ಬಸದಿಯ ಸಮೀಪದ ಗದ್ದೆಯೊಂದು ಹಲವು ವರ್ಷಗಳಿಂದ ಬೇಸಾಯ ಮಾಡದೇ ಹಡೀಲು ಬಿದ್ದಿದ್ದು,ಸವಣೂರಿನ ಸಮಾನ ಮನಸ್ಕ ಯುವಕರ ತಂಡ ಅಂಬಾ ಬ್ರದರ್ಸ್ ಇದರ ವತಿಯಿಂದ ಈ ಗದ್ದೆಯಲ್ಲಿ ಈ ಬಾರಿ ಬೇಸಾಯ ನಡೆಯಲಿದೆ.
ಅಂಬಾ ಬ್ರದರ್ಸ್ ತಂಡವು ಈಗಾಗಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು,ಇದೀಗ ಹಡೀಲು ಬಿದ್ದ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ಮುಂದಾಗಿದ್ದು ಈ ವಿನೂತನ ಕಾರ್ಯಕ್ರಮ ಅಂಬಾ ಗದ್ದೆಗಿಳಿಯೋಣ ಬಾ ಕಾರ್ಯಕ್ರಮಕ್ಕೆ ರವಿವಾರ ಸವಣೂರು ಬಸದಿಯ ಆವರಣದ ಗದ್ದೆಯಲ್ಲಿ ಗದ್ದೆಯ ಮಾಲಕ ನ್ಯಾಯವಾದಿ ನಿರ್ಮಲ ಕುಮಾರ್ ಜೈನ್ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಅವರು ಅಪ್ಪಟ ರೈತನಾಗಿ ಕೆಸರು ಗದ್ದೆಗಿಳಿದು ನೇಜಿ ನಾಟಿ ಮಾಡಿದರು.
ಸಚಿವ ಅಂಗಾರ ಅವರನ್ನು ರಾಜ್‌ದೀಪಕ್ ಶೆಟ್ಟಿ ಮಠ ಗೌರವಿಸಿದರು.ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರನ್ನು ಧನುಶ್ ಶೆಟ್ಟಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಂಬಾ ಬ್ರದರ್ಸ್ ಸದಸ್ಯರು, ಸವಣೂರು ವಿದ್ಯಾರಶ್ಮಿ ಕಾಲೇಜಿನ ಎನ್ನೆಸೆಸ್ ಘಟಕದ ಸದಸ್ಯರು, ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಶೆಟ್ಟಿ ಕೆಡೆಂಜಿ, ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ ,ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ,ಕಾಲೇಜಿನ ಎನ್ನೆಸೆಸ್ ಸಂಯೋಜಕ ವೆಂಕಟರಮಣ ಮೊದಲಾದವರಿದ್ದರು.
ಸುಳ್ಯ ವಿ.ಸ.ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯರ ರಾಕೇಶ್ ರೈ ಕೆಡೆಂಜಿ ಸ್ವಾಗತಿಸಿ, ಪ್ರಸ್ತಾವನೆಗೈದರು.ಬಾಲಚಂದ್ರ ರೈ ಕೆರೆಕ್ಕೋಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.