Moodbidre: ಅಂಚೆ ಕಚೇರಿಯಲ್ಲಿ ಹಣ ದುರ್ಬಳಕೆ: ಅಂಚೆ ಪಾಲಕ ಕೆಲಸದಿಂದ ವಜಾ
Team Udayavani, Jan 12, 2024, 1:08 AM IST
ಮೂಡುಬಿದಿರೆ: ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರಿಂದ ಉಳಿತಾಯ ಖಾತೆ, ವಿಮಾ ಪಾಲಿಸಿಗಳ ಹೆಸರಿನಲ್ಲಿ ಸಂಗ್ರಹಿಸಲಾದ ಸುಮಾರು 13.50 ಲಕ್ಷ ರೂ. ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಮೂಡುಬಿದಿರೆ ಲಾಡಿ ನಿವಾಸಿ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬುಧವಾರ ವಂಚನೆ ಪ್ರಕರಣ ದಾಖಲಾಗಿದೆ.
ಇಲಾಖೆಯು ಆತನನ್ನು ಕೆಲಸದಿಂದ ಅಮಾನತುಗೊಳಿಸಿ, ವಿಚಾರಣೆ ನಡೆಸಿದ್ದು, ಒಂದು ವರ್ಷದ ಹಿಂದೆಯೇ ಕೆಲಸದಿಂದ ವಜಾಗೊಳಿಸಲಾಗಿತ್ತು ಎಂದು ತಿಳಿದುಬಂದಿದೆ.
2010ರಿಂದ 2021ರ ಅವಧಿಯಲ್ಲಿ ಈ ವಂಚನೆ ನಡೆದಿದೆ. ಅಶೋಕ್ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳಿಗಾಗಿ ಗ್ರಾಹಕರು ಅಂಚೆ ಇಲಾಖೆಗೆ ಕಟ್ಟಿದ್ದ ಹಣವನ್ನು ಅವರ ಪಾಸ್ ಪುಸ್ತಕದಲ್ಲಿ ಮಾತ್ರ ನಮೂದಿಸುತ್ತಿದ್ದು ಇಲಾಖೆಯ ದಾಖಲಾತಿಯಲ್ಲಿ ಕಾಣಿಸದೆ ಇದ್ದ ಆರೋಪವಿದೆ. ಗ್ರಾಹಕರಿಂದ ಸಂಗ್ರಹವಾಗುತ್ತಿದ್ದ ಹಣವನ್ನು ಹತ್ತಿರದ ಮಿತ್ತಬೈಲು ಉಪ ಅಂಚೆ ಕಚೇರಿಗೆ ದಿನಂಪ್ರತಿ ನೀಡಬೇಕಾಗಿತ್ತು. ಆದರೆ ಆರೋಪಿ ಕೆಲವು ಗ್ರಾಹಕರ ಹಣವನ್ನು ಇಲಾಖೆಯ ಲೆಕ್ಕಕ್ಕೆ ತೋರಿಸದೆ ಉಳಿದ ಹಣವನ್ನು ಮಾತ್ರ ಮಿತ್ತಬೈಲು ಅಂಚೆ ಕಚೇರಿಗೆ ನೀಡುತ್ತಿದ್ದ ಎನ್ನಲಾಗಿದೆ.
ಬಂಟ್ವಾಳ ಉಪವಿಭಾಗದ ಸಹಾಯಕ ಸೂಪರಿಂಟೆಂಡೆಂಟ್ ಆಗಿದ್ದ ಲೋಕನಾಥ್ ಅವರಿಗೆ ಈ ವಂಚನೆ ಪ್ರಕರಣ ಗಮನಕ್ಕೆ ಬಂದು, ಅವರು ಈ ಪ್ರಕರಣವನ್ನು ಬಯಲಿಗೆ ತಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರಿಗೆ ತನಿಖಾ ವರದಿಯನ್ನು ಸಲ್ಲಿಸಿದ್ದರು. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಂಟ್ವಾಳ ಉಪವಿಭಾಗದ ಈಗಿನ ಸಹಾಯಕ ಸೂಪರಿಂಟೆಂಡೆಂಟ್ ಪ್ರಹ್ಲಾದ ನಾಯಕ್ ಆರೋಪಿ ಅಶೋಕ್ ವಿರುದ್ಧ ಬುಧವಾರ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ.
8 ಲಕ್ಷ ರೂ. ವಸೂಲಿ
ಅಂಚೆ ಇಲಾಖೆಯು ಗ್ರಾಹಕರಿಗೆ ಸಲ್ಲಿಸಬೇಕಾದ ಮೊತ್ತವನ್ನು ಹಿಂದಿರು ಗಿಸಿದೆ. ಆರೋಪಿಯಿಂದ ಈಗಾ ಗಲೇ 8 ಲಕ್ಷ ರೂ. ವಸೂಲಿ ಮಾಡ ಲಾಗಿದೆ. ಬಡ್ಡಿ ಸಹಿತ ಉಳಿದ ಸುಮಾರು 8 ಲಕ್ಷದಷ್ಟು ಮೊತ್ತವನ್ನು ಆರೋಪಿಯಿಂದ ವಸೂಲು ಮಾಡಲು ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.