ನಾಪತ್ತೆಯಾಗಿದ್ದ ಪೆರುವಾಜೆ ಗ್ರಾಮದ ಬಾಲಕ ಪತ್ತೆ
Team Udayavani, Feb 11, 2020, 3:00 PM IST
ಬೆಳ್ಳಾರೆ: ಮನೆಯ ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಬೆಳಿಗ್ಗೆ ನಾಪತ್ತೆಯಾಗಿದ್ದ ಬಾಲಕ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.
ಬೆಳ್ಳಾರೆ ಸನಿಹದ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಕುಂಞ ಅವರ ಪುತ್ರ, ಚೆನ್ನಾವರ ಕಿ.ಪ್ರಾ.ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ (11) ಪತ್ತೆಯಾದ ಬಾಲಕ.
ಬೆಳಗ್ಗೆ 7 ಗಂಟೆ ಹೊತ್ತಿಗೆ ತಾಯಿಯ ಬಳಿ ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಹೋಗಿದ್ದ. ತುಂಬಾ ಹೊತ್ತಾದರೂ ಬಾರದಿರುವ ಕಾರಣ ಮನೆ ಮಂದಿ ಹುಡುಕಾಟ ನಡೆಸಿದ್ದಾರೆ. ಆದರೆ ಆತ ಪತ್ತೆಯಾಗಿರಲಿಲ್ಲ. ಕೊನೆಗೆ ಆತ ಬೆಳ್ಳಾರೆ- ಸವಣೂರು-ಪುತ್ತೂರು ಬಸ್ ನಲ್ಲಿ ತೆರಳಿರುವ ಮಾಹಿತಿ ದೊರೆತು, ಪುತ್ತೂರು ಬಸ್ ನಿಲ್ದಾಣದಲ್ಲಿ ಹುಡುಕಾಟ ನಡೆಸಲಾಯಿತು. ಅಲ್ಲಿ ಆತ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸ್ ಠಾಣಾ ಸಿಬಂದಿಗಳು ಹಾಗೂ ಸಾರ್ವಜನಿಕರು ಹುಡುಕಾಟದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.