Missing Case ಪತಿಗೆ ಮೆಸೇಜ್ ಮಾಡಿ ಪತ್ನಿ ನಾಪತ್ತೆ
Team Udayavani, Jul 24, 2024, 11:35 PM IST
ಮಂಗಳೂರು: ನಗರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಂಗಳಾದೇವಿ ನಿವಾಸಿ ಮಹಿಳೆಯೋರ್ವಳು ತನ್ನ ಪತಿಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ ಬಳಿಕ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಪ್ರಿಯಾ ರಂಜಿತ್ (25) ನಾಪತ್ತೆಯಾದವರು. ಅವರು ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಜು. 17ರಂದು ಬೆಳಗ್ಗೆ 7.45ಕ್ಕೆ ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದರು. ಸಂಜೆ 5ಕ್ಕೆ ಪತಿಗೆ ವಾಟ್ಸ್‌ಆ್ಯಪ್ ಮೂಲಕ ಮೆಸೇಜ್ ಮಾಡಿ “ತಾನು ಅಮಿತ್ ಎಂಬವನೊಂದಿಗೆ ಹೋಗುತ್ತಿದ್ದು, ತಾಯಿ ಮತ್ತು ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ತಿಳಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸ್ವಿಚ್‌ಆಫ್ ಆಗಿದೆ.
5.1 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಮಲಯಾಳಂ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸುರು ಬಣ್ಣದ ಚೂಡಿದಾರ ಧರಿಸಿದ್ದರು. ಎಡಕೈಯಲ್ಲಿ ರಂಜಿತ್ ಎಂಬ ಹೆಸರಿನ ಟ್ಯಾಟೋ, ಬಲಕೈಯಲ್ಲಿ ಬಟರ್ ಫ್ಲೈ ಟ್ಯಾಟೋ, ಮೂಗಿನ ಕೆಳಗೆ ಕಪ್ಪು ಮಚ್ಚೆ ಇದೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.