5 ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ. ಅನುದಾನ: ವೇದವ್ಯಾಸ ಕಾಮತ್
Team Udayavani, Apr 24, 2023, 1:38 PM IST
ಮಂಗಳೂರು: ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ ‘ಅಭಿವೃದ್ಧಿ ಪಥʼ ಪುಸ್ತಕ ಬಿಡುಗಡೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ತನ್ನ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಪರಿವರ್ತನೆಯ ರೀತಿಯಲ್ಲಿ ಕಾರ್ಯ ನಡೆಸಿರುವುದಾಗಿ ಹೇಳಿದ ಅವರು, ನಗರಕ್ಕೆ ಅತೀ ಮುಖ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 40 ಕ್ಕೂ ಅಧಿಕ ಓವರ್ ಹೆಡ್ ಟ್ಯಾಂಕ್‌ಗಳ ನಿರ್ಮಾಣದೊಂದಿಗೆ 792 ಕೋಟಿ ರೂ.ಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಇದನ್ನೂ ಓದಿ: ಗನ್ ಮ್ಯಾನ್ ಭದ್ರತೆ ವಾಪಸ್: ಆತಂಕ ವ್ಯಕ್ತಪಡಿಸಿದ ರಹೀಂ ಉಚ್ಚಿಲ್
ಒಳಚರಂಡಿ ಸಮಸ್ಯೆ ಬಗೆಹರಿಸಲು 300 ಕೋಟಿರೂ.ಗಳ ಕುಡ್ಸೆಂಪ್ ಯೋಜನೆ ಜಾರಿಯಲ್ಲಿದ್ದು, ಸ್ಮಾರ್ಟ್ ಸಿಟಿಯಡಿ ಹಲವಾರು ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ ನಗರದಲ್ಲಿದ್ದ 70000 ಕ್ಕೂ ಅಧಿಕ ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಹೊರಹೋಗಿದ್ದು, ವಾಪಾಸದವರ ಸಂಖ್ಯೆ ಕಡಿಮೆ ಆಗಿರುವ ಕಾರಣ ಕಾಮಗಾರಿ ವೇಗ ಸ್ವಲ್ಪ ಕುಂಠಿತ ಆಗಿತ್ತು. ಎರಡು ವರ್ಷಗಳಲ್ಲಿ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಲಿದೆ. ಮೂಡಾ ತೆರಿಗೆ ಸರಳೀಕರಣಗೊಳಿಸಲಾಗಿದ್ದು, ನೆರೆ ಹಾವಳಿ ತಡೆಗೆ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣಕ್ಕಾಗಿ 1500 ಕೋಟಿ ರೂ. ಅಗತ್ಯವೆಂದು ಹೇಳಲಾಗಿದ್ದು, ಈಗಾಗಲೇ 125 ಕೋಟಿರೂ.ಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಕ್ಷೇತ್ರದ ಮೂರು ಸರಕಾರಿ ಪದವಿ ಕಾಲೇಜುಗಳು ನ್ಯಾಕ್‌ನಿಂದ ‘ಎ’ ಗ್ರೇಡ್ ಪಡೆದಿದ್ದು, ಕ್ಷೇತ್ರವೊಂದರಲ್ಲಿ ಇಂತಹ ಸಾಧನೆ ಇದು ರಾಜ್ಯದಲ್ಲೇ ಪ್ರಥಮ ಎಂದು ವೇದವ್ಯಾಸ ಕಾಮತ್ ಹೇಳಿದರು.
ಅಭಿವೃದ್ಧಿ ಪಥ ಬಿಡುಗಡೆಯನ್ನು ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಗೋಷ್ಟಿಯಲ್ಲಿ ಮೂಡ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು, ಮಾಜಿ ಮೇಯರ್ ದಿವಾಕರ್, ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ರೂಪಾ ಡಿ. ಬಂಗೇರ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮನಪಾ ಮಾಜಿ ಸದಸ್ಯ ವಿಜಯ ಕುಮಾರ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಸುರೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.