ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ
Team Udayavani, Oct 23, 2021, 4:35 PM IST
ಸುರತ್ಕಲ್ : ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.
ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದರು.
ಪೊಲೀಸ್ ಗುಪ್ತಚರ ವ್ಯವಸ್ಥೆ ಬಲಪಡಿಸಿ, ಹಿಂದೂ ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚಿಸಿದರು.
ಇದನ್ನೂ ಓದಿ: ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ
ಬೈಕಂಪಾಡಿಯಲ್ಲಿ ಕರ್ಕೇರ ನಾಗ ಮೂಲಸ್ಥಾನ ವಿಗ್ರಹ ಭಗ್ನ ಘಟನೆ ಬಳಿಕ ಕೆಲವೇ ದಿನದ ಅಂತರದಲ್ಲಿ ಇದೀಗ ಕೂಳೂರಿನಲ್ಲಿ ನಡೆದಿದೆ. ನನ್ನ ಕ್ಷೇತ್ರದಲ್ಲಿ ಕೋಮು ಸಂಘರ್ಷ ಉಂಟು ಮಾಡಲು ಷಡ್ಯಂತ್ರ್ಯ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ದೇವಸ್ಥಾನ, ನಾಗಬನ,ದೈವಸ್ಥಾನಗಳು ಹಿಂದೂಗಳ ಪೂಜನೀಯ ಸ್ಥಳಗಳಾಗಿದ್ದು ಇವುಗಳನ್ನು ಧ್ವಂಸಗೊಳಿಸುವ ಷಡ್ಯಂತ್ರ್ಯವನ್ನು ಪತ್ತೆ ಹಚ್ಚಿ ಜೈಲಿಗೆ ತಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಈ ರೀತಿಯ ಹೀನ ಕೃತ್ಯ ಮಾಡುವ ಅಪರಾಧಿಗಳನ್ನು ಮಟ್ಟ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.