Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
Team Udayavani, Nov 5, 2024, 10:03 AM IST
ಕಾವೂರು: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದರ ವಾಹನಕ್ಕೆ ಭಾನುವಾರ(ನ.3) ಕಾಸರಗೋಡು ಬೊವಿಕ್ಕಾನದಲ್ಲಿ ಸಮಾಜಘಾತುಕ ಶಕ್ತಿಗಳು ಅಡ್ಡಿಪಡಿಸಿ ಹಾನಿ ಮಾಡಿರುವುದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಮಂಗಳವಾರ(ನ.5) ತೀವ್ರವಾಗಿ ಖಂಡಿಸಿದ್ದಾರೆ.
ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಪುಂಡರು, ಹಿಂದು ವಿರೋಧಿ ಶಕ್ತಿಗಳು ಸವಾಲು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಅಲ್ಲಿನ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.
ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ಹಾಗೂ ನಮ್ಮ ಸಮಾಜದ ಪೂಜ್ಯ ಮಠಗಳಲ್ಲಿ ಒಂದಾಗಿರುವ ಎಡನೀರು ಮಠದ ಶ್ರೀಗಳ ಮೇಲಿನ ದಾಳಿ ಹಿಂದೂ ಸಮಾಜದ ಮೇಲೆ ನಡೆದಿರುವ ದಾಳಿಯಾಗಿದೆ. ಸರಕಾರ ತಕ್ಷಣ ಸಮಾಜಘಾತ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಜಾಮೀನು ರಹಿತ ಸೆಕ್ಷನ್ ಅಡಿ ಕೇಸು ದಾಖಲಿಸಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.