ಸೌಜನ್ಯಾಳ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಶಾಸಕ ಪೂಂಜರಿಂದ ಸಿಎಂಗೆ ಮನವಿ
Team Udayavani, Jul 23, 2023, 7:47 AM IST
ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿದ್ಧಾರೆ.
2012ರ ಅಕ್ಟೋಬರ್ 9ರಂದು ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಹಲವಾರು ಇಲಾಖೆಗಳಿಂದ ತನಿಖೆ ನಡೆದು ಅನಂತರ ತಮ್ಮ ನೇತೃತ್ವದ ಸರಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೊಪ್ಪಿಸಿತ್ತು. 2023ರ ವರೆಗೂ ನಡೆದ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷಿಸಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ಜನರದ್ಧಾಗಿದೆ. ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕ್ಷೇತ್ರದ ಶಾಸಕನ ಹಾಗೂ ವೈಯಕ್ತಿಕ ನೆಲೆಯಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ಧಾರೆ.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.