ರಾಜ್ಯ ಸರ್ಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ : ಕಾಮತ್
Team Udayavani, May 19, 2021, 5:39 PM IST
ಮಂಗಳೂರು : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆ(ಗುರುವಾರ, ಮೇ 20)ಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ಮಾಡಿ ಮಾತನಾಡಿದ ಶಾಸಕ ಕಾಮತ್, ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಪಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಳೆಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ : 15 ಲಕ್ಷ ರೂಪಾಯಿಗೆ ಬೇಡಿಕೆ; ಲಂಚ ಸ್ವೀಕರಿಸಿದ 3 ಕಸ್ಟಮ್ಸ್ ಅಧಿಕಾರಿಗಳು ಸಿಬಿಐ ಬಲೆಗೆ
ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿಶೇಷ ಪ್ರಯತ್ನದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ ಆರ್ ಎಫ್ ನಿಧಿಯಲ್ಲಿ 2 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ 2 ಆಕ್ಸಿಜನ್ ಪ್ಲಾಂಟ್`ಗಳೂ ಕೂಡ ಜನರ ಸೇವೆಗೆ ಲಭ್ಯವಾಗಲಿದೆ. ಈ ಹಿಂದೆ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತಿನಿತ್ಯ 2.5 ಕೆ.ಎಲ್ ಆಕ್ಸಿಜನ್ ಸಾಕಾಗುತಿತ್ತು. ಆದರೆ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದು ಸರಿಸುಮಾರು 5 ಕೆ.ಎಲ್ ಆಕ್ಸಿಜನ್ ಬೇಡಿಕೆಯಿದೆ ಎಂದು ಹೇಳಿದ್ದಾರೆ.
ಸದ್ಯ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೀಡುತ್ತಿರುವ ಆಮ್ಲಜನಕ ನಿರ್ಮಾಣ ಘಟಕದಿಂದ ವೆನ್ಲಾಕ್ ಆಸ್ಪತ್ರೆಗೆ ಆಕ್ಸಿಜನ್ ಸಂಪನ್ಮೂಲವನ್ನು ಒದಗಿಸಿದಂತಾಗಿದೆ. ಈ ಪ್ಲಾಂಟ್ ನಿರ್ಮಾಣದಿಂದ ಪ್ರತಿನಿತ್ಯ 1 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಬಹುದು. ಇದರಿಂದಾಗಿ ಮೆಡಿಕಲ್ ಆಕ್ಸಿಜನ್ ಸರಬರಾಜುದಾರರ ಮೇಲೆ ಅವಲಂಬಿತವಾಗುವುದನ್ನು ಕಡಿಮೆಗೊಳಿಸಬಹುದಾಗಿದೆ ಎಂದಿದ್ದಾರೆ.
ಇನ್ನು, ಆಕ್ಸಿಜನ್ ಉತ್ಪಾದನಾ ಘಟಕವನ್ನು ವೆನ್ಲಾಕ್ ಆಸ್ಪತ್ರೆಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್,ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್,ಬಿಜೆಪಿ ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ಮುಖಂಡರಾದ ಸಚಿನ್ ರಾಜ್ ರೈ, ಮೋಹನ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಜಾಗ್ವಾರ್ ಲ್ಯಾಂಡ್ ರೋವರ್ : ಆ್ಯಂಟಿ ವೈರಸ್ ತಂತ್ರಜ್ಞಾನ ಕೋವಿಡ್ ವಿರುದ್ಧ ಪರಿಣಾಮಕಾರಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.