ವಿಧಾನಪರಿಷತ್ ಚುನಾವಣೆ: ಇಂದು ಚುನಾವಣೆ; ಡಿ. 14 ಮತ ಎಣಿಕೆ
Team Udayavani, Dec 10, 2021, 6:18 AM IST
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣ ಕ್ಷೇತ್ರದ ಎರಡು ಸ್ಥಾನಗಳಿಗೆ ಡಿ. 10ರಂದು ನಡೆಯುವ ಚುನಾವಣೆಯಲ್ಲಿ ದ.ಕ.ದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರು ಮತ ಚಲಾಯಿಸಲಿದ್ದಾರೆ.
ದ.ಕ.ದಲ್ಲಿ 231 ಹಾಗೂ ಉಡುಪಿ ಜಿಲ್ಲೆಯಲ್ಲಿ 158 ಮತಗಟ್ಟೆಗಳು ಸೇರಿ 389 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ, ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದ ಶಾಫಿ ಕೆ. ಕಣದಲ್ಲಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಚುನಾವಣೆ ಕರ್ತವ್ಯಕ್ಕೆ ಉಭಯ ಜಿಲ್ಲೆಗೆ ಅಧಿಕಾರಿ, ಸಿಬಂದಿ ಹಾಗೂ ಪೊಲೀಸ್ ಸಿಬಂದಿ ಸೇರಿ ಒಟ್ಟು 2,101 ಮಂದಿಯನ್ನು ನಿಯೋಜಿಸಲಾಗುತ್ತಿದೆ.
ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರಗಳು:
ದ.ಕ.ದ ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಸುಳ್ಯಗಳಲ್ಲಿ ತಾಲೂಕು ಕಚೇರಿ, ಮಂಗಳೂರಿನಲ್ಲಿ ತಾ. ಪಂ., ಬಂಟ್ವಾಳದಲ್ಲಿ ಇನ್‌ಫೆಂಟ್ ಜೀಸಸ್ ಹಿ. ಪ್ರಾ. ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು, ಕಡಬದಲ್ಲಿ ಪ. ಪಂ. ಕಚೇರಿ, ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳದಲ್ಲಿ ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣ ಸಿಬಂದಿ ಮತದಾನಕ್ಕೆ ಸಂಬಂಧಿಸಿದ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದರು.
ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನದ ಬಳಿಕ ಮತಪೆಟ್ಟಿಗೆಗಳನ್ನು ಡಿಮಸ್ಟರಿಂಗ್ ಕೇಂದ್ರಗಳಿಂದ ತಂದು ಮಂಗಳೂರಿನ ರೋಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ 10 ಸ್ಟ್ರಾಂಗ್ ರೂಂಗಳಲ್ಲಿ ಇಡಲಾಗುವುದು. ಡಿ.14ರಂದು ಇಲ್ಲಿ ಮತ ಎಣಿಕೆಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.