ಪ್ರಧಾನಿ ಮೋದಿ ಹೆಸರಲ್ಲಿ ಸರಪಾಡಿ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ !
Team Udayavani, Dec 26, 2019, 6:57 PM IST
ಬಂಟ್ವಾಳ: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಎಲ್ಲಡೆ ಗ್ರಹಣ ದೋಷದ ಪರಿಹಾರಾರ್ಥವಾಗಿ ಗುರುವಾರ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಬೇರೆ ಬೇರೆ ರೀತಿಯ ಪೂಜಾ ವಿಧಿ ವಿಧಾನಗಳು ನಡೆದಿದ್ದು, ಸರಪಾಡಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅಭಿಮಾನಿ ಭಕ್ತರು ಹೋಮ ಮಾಡಿಸಿದ್ದಾರೆ.
ತಾಲೂಕಿನ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲೂ ಗ್ರಹಣದ ಹಿನ್ನೆಲೆಯಲ್ಲಿ ಗ್ರಹಣ ಶಾಂತಿ ಹೋಮ ಆಯೋಜಿಸಲಾಗಿತ್ತು. ಈ ವೇಳೆ ಮೋದಿ ಅಭಿಮಾನಿ ಭಕ್ತರು ಪ್ರಧಾನಿಯ ಹೆಸರಿನಲ್ಲಿ ಹೋಮದ ನಿಗದಿತ ಮೊತ್ತವನ್ನು ಪಾವತಿಸಿ ರಶೀದಿ ಮಾಡಿಕೊಂಡು ಪೂಜೆ ಮಾಡಿಸಿದ್ದಾರೆ. ಮೋದಿಯವರ ಪೂರ್ಣ ಹೆಸರಿನೊಂದಿಗೆ ರಾಶಿ, ನಕ್ಷತ್ರವನ್ನೂ ತಿಳಿದುಕೊಂಡು ಈ ರೀತಿ ಹೋಮದ ಸೇವೆ ನೀಡಿದ್ದಾರೆ.
ಗ್ರಹಣದ ಸಮಯದಲ್ಲಿ ದೇಶದ ಯಾವುದೋ ಒಂದು ಕಡೆ ಪ್ರಧಾನಿಯವರ ಹೆಸರಿನಲ್ಲಿ ಭಕ್ತರು ಪೂಜೆ ಮಾಡಿಸಿರುವುದನ್ನು ಫೇಸ್ಬುಕ್ ಮೂಲಕ ತಿಳಿದುಕೊಂಡು ತಾವೂ ಹೋಮ ಮಾಡಿಸಿದ್ದಾರೆ. ಪ್ರಧಾನಿಯವರಿಗೆ ದೇಶವನ್ನು ಸೂಕ್ತ ರೀತಿಯಲ್ಲಿ ಮುನ್ನಡೆಸುವ ಶಕ್ತಿ ಸಿಗಲಿ ಎಂದು ಹೋಮ ಮಾಡಿಸಿದ್ದೇವೆ ಎಂದು ಅಭಿಮಾನಿ ಭಕ್ತರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್!
Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.