ಮೋದಿ ಆಗಮನ; ಕೇಂದ್ರ ಮೈದಾನಕ್ಕೆ ಪೊಲೀಸ್ ಕಣ್ಗಾವಲು
Team Udayavani, Apr 9, 2019, 6:00 AM IST
ಮಹಾನಗರ: ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎ. 13ರಂದು ಮಂಗಳೂರಿಗೆ ಆಗಮಿಸಿ, ಕೇಂದ್ರ ಮೈದಾನದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸುವ ಹಿನ್ನೆಲೆ ಯಲ್ಲಿ ಮೈದಾನಕ್ಕೆ ಈಗಿಂದಲೇ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮಂಗಳೂರಿಗೆ ಮೋದಿ ಆಗಮಿಸಲು ಐದು ದಿನಗಳು ಮಾತ್ರ ಬಾಕಿ ಉಳಿದಿರುವ ಕಾರಣ ದ.ಕ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವ್ಯಾಪಕ ಭದ್ರತೆ ಹಾಗೂ ಸಿದ್ಧತೆ ಕೈಗೊಂಡಿದೆ.
ಮೋದಿ ಭಾಷಣ ಮಾಡಲಿರುವ ಕೇಂದ್ರ ಮೈದಾನದ ಫುಟ್‌ಬಾಲ್ ಸ್ಟೇಡಿಯಂ ಸುತ್ತ ಈಗ ಪೊಲೀಸ್ ಪಹರೆ ನಿಯೋಜಿಸಲಾಗಿದ್ದು, ಮೈದಾನದ ನಾಲ್ಕೂ ಭಾಗಗಳಲ್ಲಿ ಜನರ ಆಗಮನಕ್ಕೆ ಅವಕಾಶ ನಿರಾಕರಿಸಲಾಗಿದೆ.
ಮೈದಾನಕ್ಕೆ ಜನರು ಹೋಗದಂತೆ ಈಗಲೇ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಭದ್ರತೆ ಗಾಗಿ ಪೊಲೀಸ್ ವಾಹನವನ್ನು ಕೂಡ ನಿಯೋಜಿಸಲಾಗಿದೆ. ಮೈದಾನದ ಸುತ್ತಮುತ್ತ ಅನುಮಾನಾಸ್ಪದವಾಗಿ ಸಂಚರಿಸುವ ಜನರ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದಾರೆ.
ರಾಜ್ಯ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿಯಮಾನುಸಾರ ಪ್ರಧಾನಿಗೆ ನೀಡಬೇಕಾದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎ. 5ರಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿತ್ತು.
ಗರಿಷ್ಠ ಭದ್ರತೆ
ನಗರಕ್ಕೆ ಪ್ರಧಾನಿ ಆಗಮಿಸುವ ವೇಳೆ ಅವರಿಗೆ ಗರಿಷ್ಠ ಭದ್ರತೆ ಒದಗಿಸಬೇಕಾಗಿದೆ. ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಪೊಲೀಸ್ ಅಧಿಕಾರಿಗಳ ಜತೆಗೆ ವಿಶೇಷ ಸಭೆ ನಡೆಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ಸದಾಚಾರ ಸಂಹಿತೆ ಉಲ್ಲಂಘನೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸುವಂತೆ ಅವರು ಪಕ್ಷದವರಿಗೆ ಸೂಚನೆ ನೀಡಿದ್ದಾರೆ. ಪ್ರಚಾರ ಸಾಮಗ್ರಿಗಳನ್ನು ಅನುಮತಿಯೊಂದಿಗೆ ಬಳಸುವಂತೆ ಸೂಚಿಸಿದ್ದಾರೆ.
ವಿಮಾನ ನಿಲ್ದಾಣದ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳು, ಆಗಮನ ಮತ್ತು ನಿರ್ಗಮನದ ಬಗ್ಗೆ ಪಿಎಂಒದಿಂದ ಬಂದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಈ ಮಧ್ಯೆ, ಮೋದಿ ಆಗಮನದ ಕಾರಣದಿಂದ ಬಿಜೆಪಿಯು ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗೆ ಆರ್. ಅಶೋಕ್ ನೇತೃತ್ವದಲ್ಲಿ ಚಪ್ಪರ ಮುಹೂರ್ತ ನೆರವೇರಿಸಲಾಗಿದೆ. ಚಪ್ಪರ ಹಾಕಲು ಬೇಕಾದ ವಸ್ತುಗಳನ್ನು ಮೈದಾನಕ್ಕೆ ತರಿಸಲಾಗಿದ್ದು ಸಿದ್ಧತೆ ನಡೆಸಲಾಗುತ್ತಿದೆ.
ಪ್ರಧಾನಿ ಮಂಗಳೂರಿಗೆ ಆಗಮಿಸುವ ಕಾರಣಕ್ಕಾಗಿ ವಿಮಾನ ನಿಲ್ದಾಣದಿಂದ ಸ್ಟೇಟ್‌ಬ್ಯಾಂಕ್‌ವರೆಗಿನ ಸುಮಾರು 15 ಕಿ.ಮೀ. ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆಯಲ್ಲಿ ಹೊಂಡ-ಗುಂಡಿಗಳು ಇರದಂತೆ ನೋಡಿಕೊಳ್ಳಲು ಹಾಗೂ ಯಾವುದೇ ರೀತಿಯ ಗೊಂದಲಗಳಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತದ ಪರವಾಗಿ ಮಂಗಳೂರು ಮನಪಾ ಆಯುಕ್ತರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.