ಫಾಝಿಲ್ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ
Team Udayavani, Aug 10, 2022, 8:38 AM IST
ಮಂಗಳೂರು : ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ, ನಿಯಮ ಮೀರಿ ನಡೆದುಕೊಂಡಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ಮಂದಿ ಪ್ರಮುಖರು ಈ ಬಗ್ಗೆ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಅವರು ಯಾವ ಮಾಹಿತಿ ಆಧಾರದಲ್ಲಿ ಹಾಗೆ ಹೇಳಿದ್ದಾರೆಂಬುದು ಗೊತ್ತಾಗಿಲ್ಲ. ಹಾಗೆ ಹೇಳಿಕೆ ನೀಡುವುದು ತಪ್ಪು. ಆ ರೀತಿ ಆಗಲು ಬಿಡುವುದಿಲ್ಲ. ನಾನು ಕೂಡ ಸುರತ್ಕಲ್ ಠಾಣೆಗೆ ಭೇಟಿ ನೀಡಿದ್ದೇನೆ. ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ.
ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ಯಾವ ರೀತಿ ನಡೆಸಿಕೊಳ್ಳಬೇಕೋ ಅದೇ ರೀತಿ ನಿಯಮಾನುಸಾರವೇ ನಡೆಸಿಕೊಳ್ಳಲಾಗಿದೆ. ಸೋಮವಾರ ಫಾಝಿಲ್ ಮನೆ ಬಳಿ ಹೋಗಿದ್ದೆ. ಅಲ್ಲಿ ಮಾತನಾಡಲು ಗಂಡಸರು ಯಾರೂ ಇರಲಿಲ್ಲ. ಅವರ ಕುಟುಂಬದ ಬಹುತೇಕ ಸದಸ್ಯರಲ್ಲಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಇದೆ. ಹಾಗಾಗಿ ಅಂತಹ ಸಂದೇಹವಿದ್ದರೆ ನೇರವಾಗಿ ಮಾತನಾಡಬಹುದಾಗಿದೆ ಎಂದು ಹೇಳಿದರು.
ಹೆಚ್ಚುವರಿ 2 ವಾಹನ ಬಳಕೆ
ಫಾಝಿಲ್ ಹತ್ಯೆ ಘಟನೆ ಕಾನೂನು ಸುವ್ಯವಸ್ಥೆಗೆ ಆತಂಕವನ್ನುಂಟು ಮಾಡಿತ್ತು. ಹಾಗಾಗಿ ಗಂಭೀರವಾಗಿಯೇ ತನಿಖೆ ನಡೆಸಲಾಗಿದೆ. 7 ಮಂದಿಯನ್ನು ಬಂಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಕೃತ್ಯಕ್ಕೆ ಹೆಚ್ಚುವರಿಯಾಗಿ ಎರಡು ವಾಹನಗಳನ್ನು ಬಳಸಿರುವುದುಗೊತ್ತಾಗಿದೆ. ಅದನ್ನು ವಶಪಡಿಸಿ ಕೊಳ್ಳಲಾಗುವುದು ಎಂದು ಆಯುಕ್ತ ಶಶಿಕುಮಾರ್ ಅವರು ತಿಳಿಸಿದರು.
ಇದನ್ನೂ ಓದಿ : ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.