ಮಂಗಳೂರು ಪ್ರಕರಣ: ಶಂಕಿತ ಉಗ್ರ ಶಾರೀಕ್ ಬಹುತೇಕ ಚೇತರಿಕೆ, ತೀವ್ರಗೊಂಡ ತನಿಖೆ
Team Udayavani, Dec 14, 2022, 6:10 AM IST
ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಬಹುತೇಕ ಚೇತರಿಸಿಕೊಂಡಿದ್ದು ಆತನನ್ನು ಎನ್ಐಎ ತಂಡ ತೀವ್ರ ವಿಚಾರಣೆಗೊಳಪಡಿಸಿದೆ.
ಸ್ಫೋಟದ ವೇಳೆ ಉಂಟಾದ ಬೆಂಕಿಯಿಂದ ಶಾರೀಕ್ಗೆ ಶೇ. 45ರಷ್ಟು ಸುಟ್ಟ ಗಾಯಗಳಾಗಿದ್ದವು. ಶ್ವಾಸಕೋಶದೊಳಗೆ ರಾಸಾಯನಿಕಯುಕ್ತ ಹೊಗೆ ಕೂಡ ಸೇರಿತ್ತು. ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಆತನನ್ನು ತನಿಖಾ ತಂಡ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.
ಇದೀಗ ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಎನ್ಐಎ ವಿಚಾರಣೆ ತೀವ್ರಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.