ಕರಾವಳಿಯಾದ್ಯಂತ ಸಂಭ್ರಮೋಲ್ಲಾಸದ ಮೊಂತಿ ಹಬ್ಬ ಆಚರಣೆ
Team Udayavani, Sep 9, 2022, 1:20 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಗುರುವಾರ ಕ್ರೈಸ್ತರು ಮೊಂತಿ ಹಬ್ಬವನ್ನು ಸಂಭ್ರಮೋಲ್ಲಾಸಗಳಿಂದ ಆಚರಿಸಿದರು.
ಬಂಟ್ವಾಳದ ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಮಂಗಳೂರು ಧರ್ಮಪ್ರಾಂತದ ಪ್ರಧಾನ ಧರ್ಮಗುರು ವಂ| ಮ್ಯಾಕ್ಸಿಂ ನೊರೊನ್ನಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ಈ ವರ್ಷ ಉತ್ತಮ ಫಸಲು ಒದಗಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಬಲಿಪೂಜೆಯನ್ನು ಅರ್ಪಿಸಲಾಯಿತು. ಮಂಗಳೂರು ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ರೋಮ್‌ಗೆ ತೆರಳಿರುವ ಕಾರಣ ಕರಾವಳಿಯ ಮೊಂತಿ ಹಬ್ಬದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿಲ್ಲ.
ಮಹಿಳೆಯರು ಮತ್ತು ಮಕ್ಕಳು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಪಿಸಿ ಭಕ್ತಿಯಿಂದ ನಮನ ಸಲ್ಲಿಸಿದರು. ದೇವಾಲಯಗಳಲ್ಲಿ ಶ್ರದ್ಧೆ ಮತ್ತು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಭತ್ತದ ತೆನೆಯನ್ನು ಮನೆಗೆ ತಂದು ಹೊಸ ಅಕ್ಕಿಯ ಅನ್ನ ತಯಾರಿಸಿ ಕುಟುಂಬಿಕರು ಸಹಭೋಜನ ಮಾಡಿದರು.
ಯೇಸುಕ್ರಿಸ್ತರ ತಾಯಿ ಮೇರಿಮಾತೆಯ ಜನ್ಮದಿನವನ್ನು ಸೆ. 8ರಂದು ಆಚರಿಸಲಾಗುತ್ತದೆ. ಮೇರಿ ಮಾತೆ ದೇವಮಾತೆ ಆಗಿದ್ದು ಪವಾಡಗಳನ್ನು ಸೃಷ್ಟಿಸುತ್ತಾರೆ ಎನ್ನುವುದು ಕೆಥೋಲಿಕರ ನಂಬಿಕೆ. ಕೈಸ್ತರು ಬಾಲೆ ಮೇರಿಗೆ ನಮಿಸುವುದರ ಜತೆಗೆ ಹೊಸ ಬೆಳೆಯ ಹಬ್ಬವನ್ನು ಆಚರಿಸಿದರು. ಹೊಸ ಭತ್ತದ ತೆನೆಯನ್ನು ಕ್ರೈಸ್ತ ದೇವಾಲಯಕ್ಕೆ ಮೆರವಣಿಗೆಯಲ್ಲಿ ತಂದು ಅಲ್ಲಿ ಅದರ ಅಶೀರ್ವಚನವನ್ನು ನೆರವೇರಿಸಲಾಯಿತು.
ಹೂವಿನ ಬುಟ್ಟಿಯಲ್ಲಿ ಹೂವುಗಳನ್ನು ತಂದು ಮೇರಿ ಮಾತೆಗೆ ಅರ್ಪಣೆ ಮಾಡಿಕೊಂಡು ಸಿಹಿ ತಿಂಡಿಗಳ ಜತೆಗೆ ಕಬ್ಬುಗಳನ್ನು ಪಡೆದು ಸಂಭ್ರಮಿಸಿದರು. ಚರ್ಚ್‌ಗಳಲ್ಲಿ ಮೆರವಣಿಗೆಯ ಮೂಲಕ ಭತ್ತದ ತೆನೆಯನ್ನು ತಂದು
ಚರ್ಚ್‌ನ ಒಳಗಿಟ್ಟು ಆಶೀರ್ವದಿಸುವ ಜತೆಯಲ್ಲಿ ಸಂಭ್ರಮದ ಬಲಿಪೂಜೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.
ಉಡುಪಿಯಲ್ಲೂ ಸಂಭ್ರಮದ ಹಬ್ಬ
ಉಡುಪಿ: ಉಡುಪಿ ಶೋಕಮಾತಾ ಇಗರ್ಜಿ, ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ದೇವಾಲಯ, ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾ ಸಹಿತವಾಗಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಮೊಂತಿ ಫೆಸ್ತ್ ಆಚರಣೆಯ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಜರಗಿತು.
ಉಡುಪಿ ಕ್ರೆಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.