ಕರಾವಳಿಯಾದ್ಯಂತ ಸಂಭ್ರಮೋಲ್ಲಾಸದ ಮೊಂತಿ ಹಬ್ಬ ಆಚರಣೆ
Team Udayavani, Sep 9, 2019, 5:49 AM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ರವಿವಾರ ಕ್ರೈಸ್ತರು ಮೊಂತಿ ಹಬ್ಬವನ್ನು ಸಂಭ್ರಮೋಲ್ಲಾಸಗಳಿಂದ ಆಚರಿಸಿದರು.
ಮಂಗಳೂರಿನ ರೊಸಾರಿಯೋ ಕೆಥೆಡ್ರಲ್ನಲ್ಲಿ ಮಂಗಳೂರು ಧರ್ಮಪ್ರಾಂತದ ಪ್ರಧಾನ ಧರ್ಮಗುರು ವಂ| ಮ್ಯಾಕ್ಸಿಂ ನೊರೊನ್ನಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ಕೆಥೆಡ್ರಲ್ನ ಧರ್ಮಗುರು ವಂ| ಜೆ.ಬಿ. ಕ್ರಾಸ್ತಾ ಉಪಸ್ಥಿತರಿದ್ದರು.
ಉಡುಪಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಪಾಂಬೂರು ಹೋಲಿ ಕ್ರಾಸ್ ಚರ್ಚ್‌ನಲ್ಲಿ ಹಬ್ಬದ ಪೂಜೆ ನಡೆಸಿ ಹೊಸ ತೆನೆಗಳಿಗೆ ಆಶೀರ್ವಚನ ನೀಡಿದರು. ಚರ್ಚ್ ಪ್ರಧಾನ ಧರ್ಮಗುರು ವಂ| ಹೆನ್ರಿ ಮಸ್ಕರೇನ್ಹಸ್ ಉಪಸ್ಥಿತರಿದ್ದರು.
ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ರೆಕ್ಟರ್ ವಂ| ಡಾ| ಲಾರೆನ್ಸ್ ಡಿ’ಸೋಜಾ ನೇತೃತ್ವದಲ್ಲಿ ಕಾರ್ಯಕ್ರಮ ಜರಗಿತು.
ಈ ವರ್ಷ ಉತ್ತಮ ಫಸಲು ಒದಗಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಬಲಿಪೂಜೆಯನ್ನು ಅರ್ಪಿಸಲಾಯಿತು.
ಮಹಿಳೆಯರು ಮತ್ತು ಮಕ್ಕಳು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಪಿಸಿ ಭಕ್ತಿಯಿಂದ ನಮನ ಸಲ್ಲಿಸಿದರು. ದೇವಾಲಯಗಳಲ್ಲಿ ಶ್ರದ್ಧೆ ಮತ್ತು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಭತ್ತದ ತೆನೆಯನ್ನು ಮನೆಗೆ ತಂದು ಹೊಸ ಅಕ್ಕಿಯ ಅನ್ನ ತಯಾರಿಸಿ ಕುಟುಂಬಿಕರು ಸಹಭೋಜನ ಮಾಡಿದರು.
ಮೇರಿ ಮಾತೆಯ ಜನ್ಮದಿನ
ಯೇಸುಕ್ರಿಸ್ತರ ತಾಯಿ ಮೇರಿಮಾತೆಯ ಜನ್ಮದಿನವನ್ನು ಸೆ. 8ರಂದು ಆಚರಿಸಲಾಗುತ್ತಿದೆ. ಮೇರಿ ಮಾತೆ ದೇವಮಾತೆ ಆಗಿದ್ದು ಪವಾಡಗಳನ್ನು ಸೃಷ್ಟಿಸುತ್ತಾರೆ ಎನ್ನುವುದು ಕೆಥೋಲಿಕರ ನಂಬಿಕೆ. ಕೈಸ್ತರು ಬಾಲೆ ಮೇರಿಗೆ ನಮಿಸುವುದರ ಜತೆಗೆ ಹೊಸ ಬೆಳೆಯ ಹಬ್ಬವನ್ನು ಆಚರಿಸಿದರು. ಹೊಸ ಭತ್ತದ ತೆನೆಯನ್ನು ಕ್ರೈಸ್ತ ದೇವಾಲಯಕ್ಕೆ ಮೆರವಣಿಗೆಯಲ್ಲಿ ತಂದು ಅಲ್ಲಿ ಅದರ ಅಶೀರ್ವಚನವನ್ನು ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.