Moodabidri ಕಂಬಳದಲ್ಲಿ ಸಮಯದ ಶಿಸ್ತು ಪಾಲನೆಗೆ ಸೈರನ್
ವಿಳಂಬವಾದಲ್ಲಿ ಮುಂದಿನ ಕೋಣಗಳಿಗೆ ಅವಕಾಶ
Team Udayavani, Nov 4, 2023, 11:51 PM IST
ಮೂಡುಬಿದಿರೆ: ಕಂಬಳದಲ್ಲಿ ಕೋಣಗಳನ್ನು ಕರೆಗೆ ಇಳಿಸು ವಾಗ ಸಮಯದ ಶಿಸ್ತು ಕಾಪಾಡಲು ಈ ಸಲದಿಂದ ಸೈರನ್ ಮೊಳಗಿಸಿ ಎಚ್ಚರಿಸುವ ಕ್ರಮವನ್ನು ಜಾರಿಗೆ ತರಲಾಗುವುದು ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.
ಜಿಲ್ಲಾ ಕಂಬಳ ಸಮಿತಿ ಮೂಡು ಬಿದಿರೆಯಲ್ಲಿ ಏರ್ಪಡಿಸಿದ್ದ ತೀರ್ಪು ಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ಮಾರ್ಗಸೂಚಿಯಂತೆ ಕಂಬಳ ವನ್ನು ಶಿಸ್ತುಬದ್ಧವಾಗಿ ನಡೆಸಿ 24 ಗಂಟೆಯೊಳಗೆ ಮುಗಿಸಲು ಕೆಲವು ನಿರ್ದೇಶನಗಳನ್ನು ರೂಪಿಸಲಾಗಿದೆ. ಸೈರನ್ ಮೊಳಗಿದ ಬಳಿಕವೂ ಕೋಣಗಳನ್ನು ಕರೆಗಿಳಿಸದಿದ್ದಲ್ಲಿ ಮುಂದಿನ
ಕೋಣಗಳಿಗೆ ಅವಕಾಶ ಕಲ್ಪಿಸಲಾಗು ವುದು. ಟಿವಿ ತೀರ್ಪುಗಾರರು, ಸ್ಕೈ ವ್ಯೂವ್ ವ್ಯವಸ್ಥೆಯಲ್ಲೂ ಹೊಸತನದ ಬದಲಾವಣೆಗಳಾಗಲಿವೆ ಎಂದರು.
ತೀರ್ಪುಗಾರರು ಯಾರದೇ ಒತ್ತಡಕ್ಕೆ ಒಳಗಾಗದೆ, ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸಲಾಗಿದೆ. ತೀರ್ಪುಗಾರರು ಸಮಯಕ್ಕೆ ಸರಿಯಾಗಿ ಕಂಬಳಕ್ಕೆ ಬಂದು ಕೊನೆಯವರೆಗೂ ಹಾಜರಿರಬೇಕು. ಕಂಬಳದಲ್ಲಿ ಯಾವುದೇ ಸಮಸ್ಯೆಗಳು ಬಂದಲ್ಲಿ ಗೌರವಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ನೇತೃತ್ವದ ಶಿಸ್ತು ಸಮಿತಿ ಪರಿಶೀಲನೆ ನಡೆಸಿ ಬಗೆಹರಿಸಲಿದೆ. ನ. 11ರಂದು ಕಾರ್ಕಳದ ಮಿಯ್ನಾರಿನಲ್ಲಿ ನಡೆಯುವ ಪ್ರಾಯೋಗಿಕ ಕಂಬಳದಲ್ಲಿ ಹೊಸ ಮಾರ್ಗಸೂಚಿಗಳ ಪಾಲನೆ ಮಾಡಲಾಗುವುದು ಎಂದು ಹೇಳಿದರು.
ಬೆಂಗಳೂರು ಕಂಬಳ
ಜಿಲ್ಲಾ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ ಮಾತನಾಡಿ, ಕಂಬಳದ ಇತಿಹಾಸದಲ್ಲೇ ಮೊತ್ತ ಮೊದಲ ಸಾಹಸವಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಸಕಲ ಸಿದ್ಧತೆಗಳು ಸಮರ್ಪಕವಾಗಿ ನಡೆಯುತ್ತಿದ್ದು ಅಲ್ಲಿ ಕರೆ, ನೀರು, ನೆರಳು ಇವುಗಳ ಸುವ್ಯವಸ್ಥೆಗೆ, ಸಮಯದ ಶಿಸ್ತಿಗೆ ಆದ್ಯತೆ ನೀಡಲಾಗುತ್ತಿದೆ; ಅಲ್ಲಿ ಕನ್ನಡ ಮತ್ತು ತುಳು ಭಾಷೆಯಲ್ಲಿ ವೀಕ್ಷಕ ವಿವರಣೆ ನೀಡಲಾಗುವುದು ಎಂದು ತಿಳಿಸಿದರು.
ಕಂಬಳ ಸಮಿತಿ ಮಾಜಿ ಅಧ್ಯಕ್ಷರಾದ ಎರ್ಮಾಳು ರೋಹಿತ್ ಹೆಗ್ಡೆ, ಪಿ.ಆರ್. ಶೆಟ್ಟಿ, ಹಾಲಿ ಕೋಶಾಧಿಕಾರಿ ಚಂದ್ರಹಾಸ ಸನಿಲ್, ಪ್ರಧಾನ ಕಾರ್ಯದರ್ಶಿ ಮುಚ್ಚಾರು ಕಲ್ಕುಡೆ ಲೋಕೇಶ್ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯಕುಮಾರ್ ಕಂಗಿನ ಮನೆ, ಪ್ರಮುಖರಾದ ಶ್ರೀಕಾಂತ ಭಟ್, ಗಿರೀಶ್ ಆಳ್ವ, ಅರುಣ್ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.