ಸಚಿವ ಖಾದರ್‌ಗೆ ಅವಹೇಳನ: ಮೂಡಬಿದಿರೆ ಆರೋಪಿ ಬೆಂಗಳೂರಿನಲ್ಲಿ ಬಂಧನ
Team Udayavani, Aug 12, 2017, 6:45 AM IST
ಮಂಗಳೂರು: “ಹಲೋ ಮಂತ್ರಿ’ ಕಾರ್ಯಕ್ರಮಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮೂಡಬಿದಿರೆಯ ದಿವ್ಯಪ್ರಸಾದ್ (35) ಬಂಧಿತ ವ್ಯಕ್ತಿ. ಈತನನ್ನು ಗುರುವಾರ ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಕದ್ರಿ ಪೊಲೀಸರು ಶುಕ್ರವಾರ ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದರು.
ಎರಡು ವಾರಗಳ ಹಿಂದೆ “ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿತ್ತು. ಆ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಭಾಗವಹಿಸಿದ್ದರು. ಸಚಿವ ಖಾದರ್ ವಿರುದ್ಧ ದಿವ್ಯ ಪ್ರಸಾದ್ ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆ ದಿವ್ಯ ಪ್ರಸಾದ್ ವಿರುದ್ಧ ಸಚಿವರ ಹಿತೈಷಿ ಬೊಳಿಯಾರ್‌ನ ಅಶ್ರಫ್ ಮೋನು ಅವರು ಕದ್ರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು ಸೆಕ್ಷನ್ ಐಪಿಸಿ 507 ಮತ್ತು ಎಟಿ ಕಾಯ್ದೆಯ ಸೆಕ್ಷನ್ 67 ಅನ್ವಯ ಪ್ರಕರಣ ದಾಖಲಿಸಿದ್ದರು.
ಆರೋಪಿ ದಿವ್ಯಪ್ರಸಾದ್ ಬೆಂಗಳೂರಿನ ಹೊಟೇಲ್ ಒಂದರಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದನು. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.