Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
20 ಸಾವಿರಕ್ಕೂ ಅಧಿಕ ಜನಸ್ತೋಮ
Team Udayavani, Nov 8, 2024, 8:34 PM IST
ಮೂಡುಬಿದಿರೆ: ಬೆಳಕು ನಿಷ್ಪಕ್ಷಪಾತ. ಭಾವನೆ, ಜವಾಬ್ದಾರಿಗಳಲ್ಲಿ, ಕರ್ತವ್ಯದಲ್ಲಿ ನಾವು ಬೆಳಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಆಶಯ ವ್ಯಕ್ತಪಡಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಗುರುವಾರ ಸಂಜೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲುರಂಗ ಮಂದಿರದಲ್ಲಿ ಏರ್ಪಡಿಸಲಾದ “ಆಳ್ವಾಸ್ ದೀಪಾವಳಿ-2024’ರಲ್ಲಿ ಸರ್ವಪರ್ಣಿಕ ಮರದ ಬಲಿಯೇಂದ್ರ ಕಂಬದ ದೀಪ ಪ್ರಜ್ವಲಿಸುವ ಮೂಲಕ ಡಾ| ಎಂ. ಮೋಹನ ಆಳ್ವ ಅವರು ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿ, ಅಜ್ಞಾನ ಹಾಗೂ ಅಂಧಕಾರ ತೊಡೆದು ದೀಪ ಹಚ್ಚೋಣ. ಜಾತಿ ಧರ್ಮ, ಕುಲ ಮತ ಎನ್ನದೇ ಸಂಬಂಧ ಬೆಳಗೋಣ. ಎಲ್ಲರೂ ಒಂದಾಗಿ ಬೆಳೆಯೋಣ ಎಂದರು.
ದೀಪಾವಳಿಯ ವಿಧಿವಿಧಾನ
15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಸಹಿತ ಪೋಷಕರು, ಸ್ಥಳೀಯರು ಸೇರಿ 20 ಸಾವಿರಕ್ಕೂ ಅಧಿಕ ಮಂದಿಯ ಉಪಸ್ಥಿತಿಯಲ್ಲಿ ದೀಪಾವಳಿಯ ಎಲ್ಲ ವಿಧಿವಿಧಾನಗಳನ್ನು ಪ್ರಸ್ತುತಪಡಿಸಲಾಯಿತು. ಗೋ ಪೂಜೆ, ತುಳಸಿ ಪೂಜೆ, ಕದಿರು ಕಟ್ಟಿ ಮನೆ ತುಂಬಿಸುವ ಕ್ರಮ, ಕಳಸೆ, ನೇಗಿಲು, ನೊಗ, ಮುಡಿ ಕಟ್ಟುವ ಕೊದಂಟಿ ಸೇರಿದಂತೆ ಸಮಗ್ರ ಕೃಷಿ ಪರಿಕರಗಳು, ಹಣ್ಣು ಹಂಪಲು, ಕರಾವಳಿಯ ಗದ್ದೆಯ ನಾಟಿಯ ತರಕಾರಿ ಬೆಳೆಗಳು, ದವಸ ಧಾನ್ಯಗಳ ಪೂಜೆ ನಡೆದವು.
ಗಣಪತಿ,ಸರಸ್ವತಿ, ಲಕ್ಷ್ಮೀ, ಶ್ರೀರಾಮ, ಶ್ರೀಕೃಷ್ಣ ಪೂಜೆ ನೆರವೇರಿತು. ಬಲಿಯೇಂದ್ರ ಪೂಜೆಯಲ್ಲಿ ಬಲಿಯೇಂದ್ರ ಪಾಡªನದ ಮೂಲಕ ಬಲಿ ಚಕ್ರವರ್ತಿಯನ್ನು ಆಹ್ವಾನಿಸಲಾಯಿತು.
ಸಾಂಸ್ಕೃತಿಕ ವೈಭವ
ನೀಲಕಂಠನ ಆರಾಧನೆಯ “ಭೋ ಶಂಭೋ, ಶಿವ ಶಂಭೋ, ಶಾಸ್ತ್ರೀಯ ನೃತ್ಯ, ಕೃಷ್ಣ -ರಾಧೆಯರ ಮೋಹಕತೆಯ ನೃತ್ಯ, ಗುಜರಾತಿನ ಗಾರ್ಭ, ಮತ್ತು ದಾಂಡಿಯಾ, ರಾಧಾ-ಶ್ಯಾಮ ನರ್ತನ, ಬಡಗುತಿಟ್ಟು ಯಕ್ಷಗಾನ ರಾಸಲೀಲೆ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಅಗ್ನಿಯ ಆಟ, ಕೇರಳದ ಚೆಂಡೆ ಹಾಗೂ ತಾಳದ ನಾದ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಆಳ್ವಾಸ್ ತಾಂತ್ರಿಕ ವಿದ್ಯಾರ್ಥಿಗಳ ಡೊಳ್ಳು ಕುಣಿತ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಕಥಕ್ ನೃತ್ಯ “ವರ್ಷಧಾರೆ, ಗೊಂಬೆ ವಿನೋದಾವಳಿ ನೃತ್ಯ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಎಲ್ಲವೂ ದೀಪಾವಳಿಯ ಸಾಂಸ್ಕೃತಿಕ ಕಲಾಪಗಳ ವಿಶೇಷತೆಯಾಗಿ ಮೂಡಿಬಂದವು.
ಶಾಸಕ ಉಮಾನಾಥ ಕೋಟ್ಯಾನ್, ಉದ್ಯಮಿ ಕೆ. ಶ್ರೀಪತಿ ಭಟ್, ಮಾಜಿ ಸಚಿವ ಅಭಯಚಂದ್ರ, ಚೌಟರ ಅರಮನೆ ಕುಲದೀಪ ಎಂ. ಐಕಳ ಹರೀಶ್ ಶೆಟ್ಟಿ, ಸಂಗೀತ ನಿರ್ದೇಶಕ ವಿ. ಮನೋಹರ್, ಜಯಶ್ರೀ ಅಮರನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವೇಣುಗೋಪಾಲ ಶೆಟ್ಟಿ, ನಿತೇಶ್ ಮಾರ್ನಾಡು, ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.