ಮೂಡಬಿದಿರೆ ವಿದ್ಯಾಗಿರಿ ಶೃಂಗೇರಿ ಶ್ರೀಗಳಿಗೆ ಪೌರ ಸಮ್ಮಾನ

Team Udayavani, Jul 1, 2017, 3:45 AM IST

30md1paura-samman.jpg

ಮೂಡಬಿದಿರೆ: “ಬುದ್ಧಿಶಕ್ತಿ ಇರುವುದರಿಂದ ಮನುಷ್ಯರು ಪ್ರಾಣಿ ಗಳಿಗಿಂತ ಶ್ರೇಷ್ಠ. ಮನುಷ್ಯರಿಗೆ ಮಾತ್ರಯುಕ್ತಾಯುಕ್ತತೆಯ ವಿವೇಚನಾ ಶಕ್ತಿ, ವಿವೇಕ ಇರುತ್ತದೆ. ಈ ಬುದ್ಧಿಶಕ್ತಿಯನ್ನು ವಿವೇಕದ ಮಾರ್ಗದಲ್ಲಿ ಮುನ್ನಡೆಸಿದಾಗ ಜೀವನವೂ ಪಾವನವಾಗು ತ್ತದೆ; ಭಗವದನುಗ್ರಹವೂ ಪ್ರಾಪ್ತಿಯಾಗುತ್ತದೆ’ ಎಂದು ಶ್ರೀ ದಕ್ಷಿಣಾ ಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ನುಡಿದರು.

ಶುಕ್ರವಾರ ಮೂಡಬಿದಿರೆ ವಿದ್ಯಾಗಿರಿಯಲ್ಲಿ “ಪೌರ ಸಮ್ಮಾನ’ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಗುರುಗಳನುಗ್ರಹ ಬೇಕು ಶ್ರೀಗಳ ಪಟ್ಟಶಿಷ್ಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿ ಗಳು ಆಶೀರ್ವ ಚನದಲ್ಲಿ “ಮನುಷ್ಯರಿಗೆ ಸಹಜವಾಗಿರುವ ಚಿತ್ತ ಚಾಪಲ್ಯ, ಚಾಂಚಲ್ಯವನ್ನೆಲ್ಲ ನಿಗ್ರಹಿಸಿಕೊಂಡು ಸಂಸ್ಕಾರಯುತರಾಗಿ ಬದುಕಬೇ ಕಾದರೆ ಗುರುಗಳ ಅನುಗ್ರಹ, ಮಾರ್ಗ ದರ್ಶನ ಅಗತ್ಯ’ ಎಂದರು.

ಸುಂದರಿ ಆನಂದ ಆಳ್ವ ಕ್ಯಾಂಪಸ್‌ನ ಡಾ| ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ನಡೆದ “ಪೌರ ಸಮ್ಮಾನ’ ಕಾರ್ಯ ಕ್ರಮದಲ್ಲಿ ಸಮಿತಿ ಕಾರ್ಯಾಧ್ಯಕ್ಷ ಡಾ| ಎಂ. ಮೋಹನ ಆಳ್ವ, ಗೌರವಾಧ್ಯಕ್ಷ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಅಧ್ಯಕ್ಷ ಶಾಸಕ ಕೆ. ಅಭಯಚಂದ್ರ, ಕಾರ್ಯದರ್ಶಿ ಕೆ. ಶ್ರೀಪತಿ ಭಟ್‌, ಜತೆ ಕಾರ್ಯದರ್ಶಿ ನಾರಾಯಣ ಪಿ.ಎಂ., ಉಪಾಧ್ಯಕ್ಷರಾದ ಚೌಟರ ಅರಮನೆ ಕುಲದೀಪ ಎಂ., ಬೊಕ್ಕಸ ಚಂದ್ರಶೇಖರ ರಾವ್‌, ಅಲಂಗಾರು ಈಶ್ವರ ಭಟ್‌ ಸಹಿತ ಪದಾಧಿಕಾರಿಗಳು, ಸದಸ್ಯರು ಸ್ವಾಮೀಜಿಯವರಿಗೆ ಬಿನ್ನವತ್ತಳೆ, ಶ್ರೀ ಶಾರದೆಯ ಕಾಷ್ಟಶಿಲ್ಪ ಕಲಾಕೃತಿ ಸಹಿತ ಗೌರವಾರ್ಪಣೆಗೈದು ಅಭಿವಂದಿಸಿದರು.

ಡಾ| ಎಂ. ಮೋಹನ ಆಳ್ವ ಶ್ರೀಗಳನ್ನು ಸ್ವಾಗತಿಸಿದರು. ವಿದ್ವಾನ್‌ ವಿನಾಯಕ ಭಟ್‌ ಗಾಳಿಮನೆ ಅವರು ಬಿನ್ನವತ್ತಳೆ ವಾಚಿಸಿದರು. ಆಳ್ವಾಸ್‌ ವಿದ್ಯಾರ್ಥಿನಿಯರಿಂದ ಶ್ರೀ ಭಾರತೀತೀರ್ಥ ಸ್ವಾಮೀಜಿ ವಿರಚಿತ ಸ್ತೋತ್ರಗಳನ್ನು ಪ್ರಸ್ತುತಪಡಿಸಿದರು. ಕಾಂಚನ ಸೋದರಿಯರಾದ ವಿ. ಶ್ರೀರಂಜನಿ ಮತ್ತು ವಿ. ಶ್ರುತಿ ರಂಜನಿ ಬಳಗದವರು ಸ್ತೋತ್ರ ಸಂಗೀತ ಸುಧಾ ಭಕ್ತಿ ಸಂಗೀತ ನಡೆಸಿಕೊಟ್ಟರು.ಸ್ವಾಮೀಜಿಯವರ ಆಪ್ತ ಸಹಾಯಕ ಕೃಷ್ಣಮೂರ್ತಿ, ಮೊಕ್ಕಾಂ ಪ್ರಭಾರಿ ತ್ಯಾಗರಾಜನ್‌, ಪ್ರಧಾನ ಪುರೋಹಿತ ಕೃಷ್ಣ ಭಟ್‌, ಕೋಟೆಕಾರು ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಬೊಳ್ಳಾವ ಸತ್ಯಶಂಕರ ಸಹಿತ ಸುಮಾರು 60 ಮಂದಿ ಪರಿವಾರದಲ್ಲಿದ್ದರು.

ಕೆ.ವಿ. ರಮಣ್‌ ನಿರೂಪಿಸಿದರು. ಶ್ರೀಪತಿ ಭಟ್‌ ವಂದಿಸಿದರು.ತಮಿಳ್ನಾಡು, ಕೇರಳ ರಾಜ್ಯಗಳಲ್ಲಿ ಮೊಕ್ಕಾಂ ಹೂಡಿ ಮೂಡಬಿದಿರೆಗೆ ಆಗಮಿಸಿ ಶುಕ್ರವಾರ ಪೌರಸಮ್ಮಾನ ಸ್ವೀಕರಿಸಿದ ಯತಿದ್ವಯರು ಅಪರಾಹ್ನ ಶೃಂಗೇರಿಗೆ ಪಯಣ ಬೆಳೆಸಿದರು.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.