ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ?; ವೃದ್ಧ ಬಂಧನ
Team Udayavani, Nov 11, 2022, 7:05 AM IST
ಮೂಡುಬಿದಿರೆ: ಬುಧವಾರ ನಡೆದ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸುವ ಮೂಲಕ ಪ್ರಕರಣದ ಕುತೂಹಲಕಾರಿ ಅಂಶ ಹೊರಬಿದ್ದಿದೆ.
ಆಕೆಯ ಸಾವಿಗೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿದ್ದು, ಆರೋಪಿ ಶ್ರೀಧರ ಪುರಾಣಿಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೈಲೂರಿನವಳಾದ ಹುಡುಗಿಯು ಮೂಡುಬಿದಿರೆಯ ಹೊರವಲಯದಲ್ಲಿರುವ ಹೌದಾಲ್‌ನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದು ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಕೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ ನೋಟ್‌ನಲ್ಲಿ ಕಾಲೇಜಿನ ನಿವೃತ್ತ ಸಿಬ್ಬಂದಿಯ ಶ್ರೀಧರ ಪುರಾಣಿಕನ ಹೆಸರನ್ನು ಉಲ್ಲೇಖೀಸಿ, ಆತನ ಲೈಂಗಿಕ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾಳೆ.
ಈ ಹಿನ್ನೆಲೆಯಲ್ಲಿ ಆರೋಪಿ ಶ್ರೀಧರ ಪುರಾಣಿಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಯ ವಿವರ
17ರಹರೆಯದ ಮಾನಿನಿ ( ಹೆಸರು ಬದಲಾಯಿಸಲಾಗಿದೆ) ಮಂಗಳವಾರ ಕಾಲೇಜಿಗೆ ಹಾಜರಾಗಿದ್ದು, ವಿಪರೀತ ಕಿವಿನೋವು ಇರುವುದಾಗಿ ಆಕೆ ಕಾಲೇಜಿನಲ್ಲಿ ತಿಳಿಸಿದ್ದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಆಕೆಯ ಪೋಷಕರೊಬ್ಬರಿಗೆ ಕರೆಮಾಡಿ ಆಕೆಯನ್ನು ಕರೆದುಕೊಂಡು ಹೋಗಲು ಸೂಚಿಸಿದ್ದರೆನ್ನಲಾಗಿದೆ.
ಕರೆ ಸ್ವೀಕರಿಸಿದ ಆಕೆಯ ಪೋಷಕರೊಬ್ಬರು ಕೆಲಸದ ಒತ್ತಡದಲ್ಲಿರುವುದರಿಂದ ಆರೋಪಿ ಪುರಾಣಿಕನಿಗೆ ಆಕೆಯನ್ನು ಕಾಲೇಜಿನಿಂದ ಕರೆತರುವಂತೆ ಸೂಚಿಸಿದ್ದಾರೆ. ಸಂತ್ರಸ್ಥೆಯ ಪೋಷಕರು ಆರೋಪಿ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ಕಾರಣ ಪರಿಚಯಸ್ಥ ಪುರಾಣಿಕ ಆಕೆಯನ್ನು ತನ್ನ ಕಾರಿನಲ್ಲಿ ಮನೆಯತ್ತ ಕರೆದುಕೊಂಡು ಬರುವಾಗ ಕಾರು ನಿಲ್ಲಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆನ್ನಲಾಗಿದೆ. ಇದರಿಂದ ಮನನೊಂದ ಆಕೆಯು ಬುಧವಾರ ತನ್ನ ವಾಸ್ತವ್ಯದ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಳೆನ್ನಲಾಗಿದೆ.
ಮಾನಿನಿಯು ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯಿದೆ, ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ದಂಡ ಸಂಹಿತೆಯ ಆಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಹಾಯಕ ಕಮಿಷನರ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.