ಮೂಡುಬಿದಿರೆ : ಶಾಲಾ ಬಸ್ – ಕಾರು ನಡುವೆ ಅಪಘಾತ, ಚಾಲಕನ ಸ್ಥಿತಿ ಗಂಭೀರ
Team Udayavani, Nov 2, 2022, 6:11 PM IST
ಮೂಡುಬಿದಿರೆ : ಅಲಂಗಾರು ಸೈಂಟ್ ಥಾಮಸ್ ಶಾಲಾ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಕಾರಿನ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಅಲಂಗಾರು ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಮೂಡುಬಿದಿರೆ ಆಲಂಗಾರಿನ ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ 09 ಝೆಡ್ 7481 ನಂಬರಿನ ಕಾರು ಆಲಂಗಾರು ಬಳಿ ಒಮ್ಮೆಲೆ ಬ್ರೇಕ್ ಹಾಕಿ ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ .ಆಗ ಶಾಲಾ ವಾಹನದ ಚಾಲಕ ಬಸ್ಸನ್ನು ಎಡ ಬದಿಗೆ ತಿರುಗಿಸಿದ್ದು ಈ ವೇಳೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ ಇದೇ ವೇಳೆ ವೇಗವಾಗಿ ಬಂದ ಕಾರು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.
ಇದನ್ನೂ ಓದಿ : ಕಾಸರಗೋಡು :ಸಂಗೀತವನ್ನು ಆಲಿಸಿ; ಆನಂದಿಸುತ್ತಿರುವ ಗೋವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.